nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಾರ್ತಾ ಇಲಾಖೆ ಆದೇಶದಿಂದ ಪತ್ರಿಕೆಗಳ ಅಸ್ತಿತ್ವಕ್ಕೆ ಧಕ್ಕೆ :  ಆದೇಶ ಹಿಂಪಡೆಯುವಂತೆ ಸಂಪಾದಕರ ಸಂಘದಿಂದ ಮುಖ್ಯಮಂತ್ರಿಗಳಿಗೆ ಮನವಿ

    November 5, 2026

    ರೇಷ್ಮೆ ಸೀರೆಗೆ ಎಣ್ಣೆ, ಮೇಣದ ಕಲೆ ಬಿದ್ದರೆ ಚಿಂತೆ ಬೇಡ; ಈ ಟಿಪ್ಸ್ ಅನುಸರಿಸಿ

    November 4, 2026

    ನಾಯಿಗಳಲ್ಲ, ರೋಬೋಟ್‌ ಗಳಿಗೆ ವಾಕಿಂಗ್ ಮಾಡಿಸಿದರೆ ದುಡ್ಡು! AI ತಂತ್ರಜ್ಞಾನಕ್ಕೆ ಹೊಸ ಪ್ರಯೋಗ

    November 4, 2026
    Facebook Twitter Instagram
    ಟ್ರೆಂಡಿಂಗ್
    • ವಾರ್ತಾ ಇಲಾಖೆ ಆದೇಶದಿಂದ ಪತ್ರಿಕೆಗಳ ಅಸ್ತಿತ್ವಕ್ಕೆ ಧಕ್ಕೆ :  ಆದೇಶ ಹಿಂಪಡೆಯುವಂತೆ ಸಂಪಾದಕರ ಸಂಘದಿಂದ ಮುಖ್ಯಮಂತ್ರಿಗಳಿಗೆ ಮನವಿ
    • ರೇಷ್ಮೆ ಸೀರೆಗೆ ಎಣ್ಣೆ, ಮೇಣದ ಕಲೆ ಬಿದ್ದರೆ ಚಿಂತೆ ಬೇಡ; ಈ ಟಿಪ್ಸ್ ಅನುಸರಿಸಿ
    • ನಾಯಿಗಳಲ್ಲ, ರೋಬೋಟ್‌ ಗಳಿಗೆ ವಾಕಿಂಗ್ ಮಾಡಿಸಿದರೆ ದುಡ್ಡು! AI ತಂತ್ರಜ್ಞಾನಕ್ಕೆ ಹೊಸ ಪ್ರಯೋಗ
    • ವಿಮಾನದಲ್ಲೂ ಇರುತ್ತಾ ಹಾರ್ನ್? ಆಕಾಶದಲ್ಲಿ ಯಾರಿಗೆ ಹಾರ್ನ್? | ಈ ಅಚ್ಚರಿಯ ಸಂಗತಿ ನಿಮಗೆ ಗೊತ್ತಾ?
    • ಫ್ರಿಜ್‌ ನಿಂದ ತೆಗೆದ ತಕ್ಷಣ ಮೊಸರು ತಿನ್ನುತ್ತೀರಾ? ಆರೋಗ್ಯದ ಮೇಲೆ ಏನು ಪರಿಣಾಮ ಬೀರುತ್ತದೆ?
    • ನ.7ರಂದು ಹೊಳವನಹಳ್ಳಿ ಹೋಬಳಿಯಲ್ಲಿ ಪ್ರಜಾಸೇವೆ ಆಂದೋಲನ ಸಭೆ
    • ತಿಪಟೂರು ರೋಟರಿ ಕ್ಲಬ್‌ ನಿಂದ ಅದ್ದೂರಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ
    • ಔರಾದ್ ಬ್ಲಾಕ್ ಕಾಂಗ್ರೆಸ್ ಪ.ಜಾ. ವಿಭಾಗದ ಕಾರ್ಯದರ್ಶಿಯಾಗಿ ಗೌತಮ್ ಮೇತ್ರೆ ನೇಮಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರತಿಭೆ, ಸಾಧನೆಗೆ ಬಡತನ ಅಡ್ಡಿಯಾಗಬಾರದು:ಲಕ್ಷ್ಮೀ ಹೆಬ್ಬಾಳಕರ್
    ಜಿಲ್ಲಾ ಸುದ್ದಿ February 27, 2023

    ಪ್ರತಿಭೆ, ಸಾಧನೆಗೆ ಬಡತನ ಅಡ್ಡಿಯಾಗಬಾರದು:ಲಕ್ಷ್ಮೀ ಹೆಬ್ಬಾಳಕರ್

    By adminFebruary 27, 2023No Comments2 Mins Read
    laxmi hebalkar

    ಬೆಳಗಾವಿ: ಮಕ್ಕಳ ಪ್ರತಿಭೆಗೆ, ಜೀವನದಲ್ಲಿ ಅತ್ಯುನ್ನತ ಸಾಧನೆ ಮಾಡಲು ಬಡತನ ಅಡ್ಡಿಯಾಗಬಾರದೆನ್ನುವ ಕಾರಣದಿಂದ ಹಲವಾರು ಯೋಜನೆಗಳನ್ನು ರೂಪಿಸಲಾಗಿದ್ದು, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಹಂತ ಹಂತವಾಗಿ ಜಾರಿಗೆ ತರಲಾಗುತ್ತಿದೆ ಎಂದು ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

    ಭಾನುವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಮದ ಸರ್ಕಾರಿ ಹಿರಿಯ ಪಾಥಮಿಕ ಮರಾಠಿ ಶಾಲೆಯ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ ಗಮನಕ್ಕೆ ತಂದರೂ ಆದ್ಯತೆಯ ಮೇಲೆ ಪರಿಹರಿಸುತ್ತಿದ್ದೇನೆ. ಸರಕಾರದ ಯೋಜನೆ ಇರಬಹುದು, ಶಾಸಕರ ನಿಧಿ ಇರಬಹುದು, ಲಕ್ಷ್ಮೀ ತಾಯಿ ಫೌಂಡೇಶನ್ ಮೂಲಕ ಇರಬಹುದು. ಒಟ್ಟಾರೆ ಯಾವೊಂದು ಶಾಲೆ, ಯಾವೊಂದು ಮಕ್ಕಳು ಕೂಡ ಸಮಸ್ಯೆ ಎದುರಿಸಬಾರದೆಂದು ಎಚ್ಚರವಹಿಸಿ ಕೆಲಸ ಮಾಡುತ್ತಿದ್ದೇನೆ ಎಂದು ಅವರು ತಿಳಿಸಿದರು.

    ಮಕ್ಕಳಿಗೆ ಪಠ್ಯ ಪುಸ್ತಕಗಳನ್ನು ವಿತರಿಸಲಾಗಿದೆ. ಜಿಮ್ ಹಾಗೂ ಕ್ರೀಡಾ ಉಪಕರಣಗಳನ್ನು ವಿತರಿಸಲಾಗುತ್ತಿದೆ. ವಯಕ್ತಿಕಾಗಿ ಹಲವಾರು ಪ್ರತಿಭೆಗಳಿಗೆ ಆರ್ಥಿಕ ನೆರವು ಒದಗಿಸಲಾಗಿದೆ. ಆರ್ಥಿಕ ಸಮಸ್ಯೆಯಿಂದಾಗಿ ಯಾರೊಬ್ಬರೂ ತಮ್ಮ ಸಾಧನೆಯಲ್ಲಿ ಹಿಂದುಳಿಯಲು ಅವಕಾಶ ಕೊಡುವುದಿಲ್ಲ. ನಿಮ್ಮ ಜೊತೆಗೆ ಸದಾ ನಾನಿದ್ದೇನೆ ಎಂದು ಹೆಬ್ಬಾಳಕರ್ ಭರವಸೆ ನೀಡಿದರು.

    ಪಾಲಕರು ಎಷ್ಟು ಕಷ್ಟಪಟ್ಟು ಮಕ್ಕಳನ್ನು ಬೆಳೆಸುತ್ತಾರೆ, ಓದಿಸುತ್ತಾರೆ ಎನ್ನುವುದು ನನಗೆ ಗೊತ್ತಿದೆ. ನಿಮ್ಮ ಕಷ್ಟದಲ್ಲಿ ನಾನಿಲ್ಲದಿದ್ದರೆ ನಾನು ಶಾಸಕಿಯಾಗಿ ಏನು ಪ್ರಯೋಜನ? ನಿಮ್ಮ ಮಕ್ಕಳು ಬೇರೆ ಅಲ್ಲ, ನನ್ನ ಮಕ್ಕಳು ಬೇರೆ ಅಲ್ಲ. ಹಾಗಾಗಿ ಎಂತಹ ಸಂದರ್ಭ ಬಂದರೂ ಮಕ್ಕಳ ಓದನ್ನು ನಿಲ್ಲಿಸುವುದು ಬೇಡ. ಮಕ್ಕಳ ಓದಿಗೆ ನೆರವು ಕೇಳಲು ಮುಜುಗರ ಬೇಡ. ಅಂತಹ ಪರಿಸ್ಥಿತಿ ಬಂದರೆ ಎಲ್ಲರೂ ಸೇರಿ ಅದಕ್ಕೊಂದು ಪರಿಹಾರ ಕಂಡುಕೊಳ್ಳೋಣ. ದೇವರು ಯಾವುದಾದರೊಂದು ದಾರಿಯನ್ನು ತೋರಿಸುತ್ತಾನೆ ಎಂದ ಹೆಬ್ಬಾಳಕರ್, ಮುಂದಿನ ದಿನಗಳಲ್ಲಿ ನಿಮ್ಮೆಲ್ಲರ ಸಹಕಾರ, ಪ್ರೋತ್ಸಾಹ ಈ ನಿಮ್ಮ ಮನೆಯ ಮಗಳ ಮೇಲಿರಲಿ ಎಂದು ವಿನಂತಿಸಿದರು.

    ನಾವಗೆ ಗ್ರಾಮದಲ್ಲಿ ಈಗಾಗಲೇ ಕನ್ನಡ‌ ಮತ್ತು ಮರಾಠಿ ಶಾಲೆಗಳಿಗೆ ಹೆಚ್ಚುವರಿ ಕೊಠಡಿಗಳ ನಿರ್ಮಾಣದ ಜತೆಗೆ ಎರಡು ಅಂಗನವಾಡಿ ಕೇಂದ್ರಗಳನ್ನು ಸಹ ನಿರ್ಮಾಣ ಮಾಡಿ ಕೊಡಲಾಗಿದೆ ಎಂದೂ ಅವರು ಹೇಳಿದರು.

    ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಮೃಣಾಲ್‌ ಹೆಬ್ಬಾಳಕರ್, ಅರ್ಚನಾ ಚಿಗರೆ, ಸಾತೇರಿ ಕಮತಿ, ಶಿಲ್ಪಾ ಕಮತಿ, ಮಾರುತಿ ಹುರಕಡ್ಲಿ, ಪ್ರಶಾಂತ ಶಹಾಪೂರಕರ್, ಶ್ಯಾಮ್ ಪಾಟೀಲ, ಸುರೇಶ ಹುಂಬರವಾಡಿ, ಧಾನಾಜಿ ಗೊಲ್ಯಾಳ್ಕರ್ ಹನಮಂತ ಹಕಲ್ದಾರ್, ಸುಜಾತಾ, ಸುರೇಶ ಹುಂಬರವಾಡಿ, ರಾಜಾರಾಮ್ ಗೊಲ್ಯಾಳ್ಕರ್, ಭರ್ಮಾ ಪಾಟೀಲ ಹಾಗೂ ಮುಂತಾದವರು ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಔರಾದ್ ಬ್ಲಾಕ್ ಕಾಂಗ್ರೆಸ್ ಪ.ಜಾ. ವಿಭಾಗದ ಕಾರ್ಯದರ್ಶಿಯಾಗಿ ಗೌತಮ್ ಮೇತ್ರೆ ನೇಮಕ

    November 4, 2026

    ಭಾಲ್ಕಿ: ವಕೀಲರ ಹಿತರಕ್ಷಣಾ ಕಾಯ್ದೆ ತಕ್ಷಣ ಜಾರಿಗೆ ತರಲು ಆಗ್ರಹ

    November 4, 2026

    ಔರಾದ್‌ | ಕುಡಿಯುವ ನೀರು ಪೂರೈಕೆಯಲ್ಲಿ ಲೋಪವಾದರೆ ಕ್ರಮ: ಶಾಸಕ ಪ್ರಭು ಚವ್ಹಾಣ

    November 3, 2026

    Comments are closed.

    Our Picks

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಾರ್ತಾ ಇಲಾಖೆ ಆದೇಶದಿಂದ ಪತ್ರಿಕೆಗಳ ಅಸ್ತಿತ್ವಕ್ಕೆ ಧಕ್ಕೆ :  ಆದೇಶ ಹಿಂಪಡೆಯುವಂತೆ ಸಂಪಾದಕರ ಸಂಘದಿಂದ ಮುಖ್ಯಮಂತ್ರಿಗಳಿಗೆ ಮನವಿ

    November 5, 2026

    ತುಮಕೂರು: ಜಿಲ್ಲಾ ಹಾಗೂ ಪ್ರಾದೇಶಿಕ ದಿನಪತ್ರಿಕೆಗಳ ದಾಖಲೆ ಸಲ್ಲಿಕೆ ಮತ್ತು ತಪಾಸಣೆ ಸಂಬಂಧ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ…

    ರೇಷ್ಮೆ ಸೀರೆಗೆ ಎಣ್ಣೆ, ಮೇಣದ ಕಲೆ ಬಿದ್ದರೆ ಚಿಂತೆ ಬೇಡ; ಈ ಟಿಪ್ಸ್ ಅನುಸರಿಸಿ

    November 4, 2026

    ನಾಯಿಗಳಲ್ಲ, ರೋಬೋಟ್‌ ಗಳಿಗೆ ವಾಕಿಂಗ್ ಮಾಡಿಸಿದರೆ ದುಡ್ಡು! AI ತಂತ್ರಜ್ಞಾನಕ್ಕೆ ಹೊಸ ಪ್ರಯೋಗ

    November 4, 2026

    ವಿಮಾನದಲ್ಲೂ ಇರುತ್ತಾ ಹಾರ್ನ್? ಆಕಾಶದಲ್ಲಿ ಯಾರಿಗೆ ಹಾರ್ನ್? | ಈ ಅಚ್ಚರಿಯ ಸಂಗತಿ ನಿಮಗೆ ಗೊತ್ತಾ?

    November 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.