ತಿಪಟೂರು: ವೀರಶೈವ ಲಿಂಗಾಯತ ನೌಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಅಕ್ಟೋಬರ್ 9ರಂದು ತಿಪಟೂರು ಗುರುಕುಲಾನಂದ ಆಶ್ರಮದಲ್ಲಿ ಲಿಂಗಾಯಿತ ಸಮಾಜದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಲಿಂಗಾಯಿತ ಸಮಾಜದ ನಿವೃತ್ತ ನೌಕರರನ್ನು ಸನ್ಮಾನಿಸಲಾಗುವುದು ಎಂದು ವೀರಶೈವ ಲಿಂಗಾಯಿತ ನೌಕರ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷ ಸ್ವಾಮಿ ತಿಳಿಸಿದರು
ಈ ಕಾರ್ಯಕ್ರಮಕ್ಕೆ ಸಿರಿಗೆರೆ ಬೃಹನ್ಮಠ ತರಳಬಾಳು ಜಗದ್ಗುರು ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಹಾಗೂ ಶ್ರೀ ಇಮ್ಮಡಿ ಕರಿಬಸವ ದೇಶಿಯ ಕೇಂದ್ರ ಸ್ವಾಮೀಜಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಕಾನೂನು ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಸಮಾರಂಭ ಉದ್ಘಾಟಿಸಲಿದ್ದಾರೆ ಎಂದು ಅವರು ತಿಳಿಸಿದರು.
ಮಾಜಿ ಶಾಸಕ ಕೆ. ಷಡಕ್ಷರಿ ಪ್ರತಿಭಾವಂತ ಮಕ್ಕಳನ್ನು ಪುರಸ್ಕರಿಸುವರು, ಕಾಂಗ್ರೆಸ್ ಮುಖಂಡ ಲೋಕೇಶ್ವರ್ ನಿವೃತ್ತ ನೌಕರರನ್ನು ಸನ್ಮಾನಿಸಲಿದ್ದಾರೆ ಎಂದು ಅವರು ಇದೇ ವೇಳೆ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಡಾ.ನವೀನ್ ಕುಮಾರ್, ದಕ್ಷಿಣ ಮೂರ್ತಿ, ಸತೀಶ್, ಚೇತನ್, ಸಂದೀಪ್ ಹಾಜರಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy