ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರನ್ನು ಪ್ರತಿಭಟನೆಗೆ ಕಳುಹಿಸಿದ ಪ್ರಾಂಶುಪಾಲರ ವಿರುದ್ಧ ಕ್ರಮ ಕೈಗೊಳ್ಳಲು ತಾಲ್ಲೂಕಿನ ಜನಪರ ಸಂಘಟನೆಗಳ ಒಕ್ಕೂಟದ ಆಗ್ರಹಿಸಿದೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ತಾಲ್ಲೂಕು ಜನಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಈ ಒತ್ತಾಯ ಮಾಡಲಾಗಿದೆ.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷರಾದ ಕೆ.ರಾಮಚಂದ್ರ, ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರನ್ನು ಪೋಷಕರ ಅನುಮತಿಯಿಲ್ಲದೆ ಒತ್ತಾಯಪೂರ್ವಕವಾಗಿ ಹೋರಾಟಕ್ಕೆ ಕಳುಹಿಸುವುದರಿಂದ ಎಳೆಯ ವಯಸ್ಸಿನಲ್ಲಿ ಮಕ್ಕಳ ಮನಸ್ಸಿನಲ್ಲಿ ಜಾತಿ-ಧರ್ಮಗಳ ವಿಷಬೀಜ ಬಿತ್ತುವ ಹುನ್ನಾರ ನಡೆಸುತ್ತಿರುವುದು ನೋವಿನಸಂಗತಿಯಾಗಿದೆ ಎಂಬುದಾಗಿ ಹೇಳಿದರು.
ತಾಲ್ಲೂಕಿನಲ್ಲಿ ಕೋಮು, ಸೌಹಾರ್ದ, ಶಾಂತಿ, ಸಹಬಾಳ್ವೆ ನಡೆಸಲು ಸಹಕಾರ ಮಾಡಿಕೊಡಬೇಕು ಎಂಬುದಾಗಿ ಜಿಲ್ಲಾಧಿಕಾರಿಗಳ ಮೂಲಕ ಶಿಕ್ಷಣ ಸಚಿವರು, ಮುಖ್ಯಮಂತ್ರಿಗಳು ಹಾಗೂ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯ ರೈತಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಸಿ.ಹೊರಕೇರಪ್ಪ, ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾ ಯುವಘಟಕದ ಅಧ್ಯಕ್ಷ ಬಿ.ರೇವಣಸಿದ್ಧಪ್ಪ, ಅಂಬೇಡ್ಕರ್ ಸ್ವಾಭಿಮಾನಿ ಸೇನೆ ತಾಲ್ಲೂಕು ಅಧ್ಯಕ್ಷ ವಿ.ಶಿವಕುಮಾರ್, ಕಾರ್ಯಾಧ್ಯಕ್ಷ ಆರ್.ರಾಘವೇಂದ್ರ, ಕರವೇ ತಾಲ್ಲೂಕು ಅಧ್ಯಕ್ಷ ಉದಯಕುಮಾರ್, ಪ್ರಧಾನಕಾರ್ಯದರ್ಶಿ ದಾದಾಪೀರ್, ನಗರ ಅಧ್ಯಕ್ಷ ಮೊಹಮ್ಮದ್ ಜಾಕೀರ್, ನಗರ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಸುಹೈಲ್ ಉಪಸ್ಥಿತರಿದ್ದರು.
ವರದಿ : ಮುರುಳಿಧರನ್ ಆರ್., ( ಚಿತ್ರದುರ್ಗ – ದಾವಣಗೆರೆ )
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB