ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಪತಿಯ ಜಾತಿ ಆದಾಯ ಪ್ರಮಾಣ ಪತ್ರ ಪರಿಗಣನೆ ಪ್ರಶ್ನಿಸಿ ನೂರಾರು ಅಭ್ಯರ್ಥಿಗಳು ರಿಟ್ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಇದೀಗ ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಮಹತ್ವದ ಆದೇಶ ಹೊರಡಿಸಿದೆ.
ನೇಮಕಾತಿಗೆ ತಂದೆ ಜಾತಿ ಆದಾಯ ಪ್ರಮಾಣ ಪತ್ರ ಪರಿಗಣಿಸಬೇಕು. ಆದರೆ ಪತಿ ಆದಾಯ ಪ್ರಮಾಣ ಪತ್ರ ಪರಿಗಣನೆ ಶಿಕ್ಷಣ ಇಲಾಖೆಯ ನಿಯಮ ಕಾನೂನು ಬಾಹಿರವೆಂದು ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದರು.
ಇದೀಗ ಶಿಕ್ಷಣ ಇಲಾಖೆಯ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಪಡಿಸಿದ ನ್ಯಾ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಅಭ್ಯರ್ಥಿಗಳ ತಂದೆಯ ಜಾತಿ ಆದಾಯ ಪ್ರಮಾಣ ಪತ್ರ ಆಧರಿಸಿ ಹೊಸದಾಗಿ ಆಯ್ಕೆಪಟ್ಟಿ ಪ್ರಕಟಿಸಲು ಶಿಕ್ಷಣ ಇಲಾಖೆಗೆ ಸೂಚನೆ ನೀಡಿತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


