ಮಧುಗಿರಿ : ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ, ಅವರಲ್ಲಿ ಆತ್ಮವಿಶ್ವಾಸ, ಸೃಜನಶೀಲತೆ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಆಯೋಜಿಸಿದ್ದ ಚಂದ್ರಗಿರಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವು ವೈಭವದಿಂದ ಹಾಗೂ ಅಚ್ಚುಕಟ್ಟಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಬಿಆರ್ಸಿ ಪವನ್ ಕುಮಾರ್ ರೆಡ್ಡಿ, ಮಕ್ಕಳ ಸರ್ವಾಂಗೀಣ ಪ್ರಗತಿಗೆ ಸರ್ಕಾರಿ ಶಾಲೆಗಳು ಮತ್ತಷ್ಟು ಅಭಿವೃದ್ಧಿಯಾಗಬೇಕು. ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಆಸಕ್ತಿಯಿಂದ ಭಾಗವಹಿಸಬೇಕು ಎಂದು ಕರೆ ನೀಡಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ವಿ. ರಮೇಶ್ ಮಾತನಾಡಿ, ಮಕ್ಕಳು ಎಲ್ಲ ರೀತಿಯ ಕಲಿಕಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಉತ್ತಮ ಜ್ಞಾನ ಹಾಗೂ ಜೀವನ ಮೌಲ್ಯಗಳನ್ನು ಬೆಳೆಸಿಕೊಳ್ಳುವ ಮೂಲಕ ಭವಿಷ್ಯದಲ್ಲಿ ಜವಾಬ್ದಾರಿಯುತ ನಾಗರಿಕರಾಗಬೇಕು ಎಂದು ತಿಳಿಸಿದರು.
ಸಂಘಟನಾ ಕಾರ್ಯದರ್ಶಿ ಜಗದೀಶ್ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ಸವಾಲುಗಳನ್ನು ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು. ನಿರಂತರ ಕಲಿಕೆ, ಪರಿಶ್ರಮ ಹಾಗೂ ಪ್ರಯತ್ನದ ಮೂಲಕ ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿ ಅಭಿವೃದ್ಧಿ ಪಡಿಸಿಕೊಳ್ಳಬೇಕು ಎಂದು ಪ್ರೇರಣೆ ನೀಡಿದರು.
ಸರ್ಕಾರಿ ನೌಕರರ ಸಂಘದ ಖಜಾಂಚಿ ಶಶಿಕುಮಾರ್ ಎಚ್.ಆರ್. ಮಾತನಾಡಿ, ಕಲಿಕೆಯ ಜೊತೆಗೆ ಸಹಪಠ್ಯ ಹಾಗೂ ಸೃಜನಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಮಕ್ಕಳಲ್ಲಿರುವ ಪ್ರತಿಭೆ ಮತ್ತಷ್ಟು ವಿಕಸನಗೊಳ್ಳಲು ಸಾಧ್ಯವಾಗುತ್ತದೆ ಎಂದರು.
ಶಿಕ್ಷಣ ಸಂಯೋಜಕ ಕಾಪು ರಾಧಾಕೃಷ್ಣ ಮಾತನಾಡಿದರು. ಕಾರ್ಯಕ್ರಮದಲ್ಲಿ ಚಂದ್ರಗಿರಿ ಕ್ಲಸ್ಟರ್ ವ್ಯಾಪ್ತಿಯ ಶಿಕ್ಷಕರು, ಅತಿಥಿ ಶಿಕ್ಷಕರು, ಸಿಆರ್ ಪಿ ಗಿರೀಶ್, ಎಸ್ ಡಿಎಂಸಿ ಅಧ್ಯಕ್ಷರು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
