ಹೆಚ್.ಡಿ.ಕೋಟೆ: ತಾಲ್ಲೂಕಿನ ಪ್ರವಾಸಿ ಮಂದಿರದ ಮುಂಭಾಗದ ಆವರಣ ಸ್ವಚ್ಛತೆ ಮಾಡದೇ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದು ದಲಿತ ಸಂಘರ್ಷ ಸಮಿತಿ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರವಾಸಿ ಮಂದಿರದ ಆವರಣದಲ್ಲಿ ತರಗೆಲೆಗಳು ರಾಶಿ ಬಿದ್ದರೂ ಯಾರೂ ತಿರುಗಿ ನೋಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಲೂಕಿನ ಶಾಸಕ ಅನಿಲ್ ಚಿಕ್ಕಮಾಧು ಹಾಗೂ ಅಧಿಕಾರಿಗಳು ಈ ವಿಚಾರವನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಆರೋಪಿಸಿರುವ ದಲಿತ ಸಂಘರ್ಷ ಸಮಿತಿ, ಶಾಸಕರು ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿದಾಗ ಮಾತ್ರವೇ ಪ್ರವಾಸಿ ಮಂದಿರದ ಆವರಣವನ್ನು ಸ್ವಚ್ಛಗೊಳಿಸಲಾಗುತ್ತದೆ ಎಂದು ಆರೋಪಿಸಿದ್ದಾರೆ
ಇಲ್ಲಿ ಸಾರ್ವಜನಿಕರು ಮೀಟಿಂಗ್ ಮಾಡಬೇಕೆಂದರೆ ಅವಕಾಶ ನೀಡುವುದಿಲ್ಲ. ಶಾಸಕರ ಗಮನಕ್ಕೆ ತಂದರೆ ಮಾತ್ರವೇ ಮೀಟಿಂಗ್ ನಡೆಸಲು ಅವಕಾಶ ನೀಡುತ್ತಾರೆ ಎಂದು ಅವರು ಆರೋಪಿಸಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700