ಕೇಂದ್ರ ಸರ್ಕಾರದ ಪ್ರವಾಸೋದ್ಯಮ ನೀತಿಯಲ್ಲಿ ಕಂಬಳವನ್ನು ಸೇರಿಸಲು ಕ್ರಮ ಕೈಗೊಳ್ಳುವ ಕುರಿತು ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಭರವಸೆ ನೀಡಿದ್ದಾರೆ.
ಈ ಮೂಲಕ ಕರ್ನಾಟಕದ ಕರಾವಳಿಯ ಪ್ರಮುಖ ಜಾನಪದ ಸಂಸ್ಕೃತಿ ಕಂಬಳಕ್ಕೆ ಹೆಚ್ಚಿನ ಸ್ಥಾನಮಾನ ದೊರೆಯುವ ಆಶಾಭಾವನೆ ದೊರೆತಿದೆ. ಕಂಬಳವನ್ನು ಕೇಂದ್ರ ಸರ್ಕಾರದ ಪ್ರವಾಸೋದ್ಯಮ ನೀತಿಯ ಭಾಗವಾಗಿ ಸೇರ್ಪಡೆಗೊಳ್ಳಲು ಒಂದು ಹೆಜ್ಜೆ ಮುಂದಿಡಲಾಗಿದೆ.
ಕೇಂದ್ರ ಸರ್ಕಾರದ ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಸಚಿವ ಶ್ರೀಪಾದ ನಾಯಕ್ ಈ ಕುರಿತು ಉಳ್ಳಾಲದಲ್ಲಿ ಭರವಸೆ ನೀಡಿದ್ದಾರೆ. ಉಳ್ಳಾಲದಲ್ಲಿ ಕಂಬಳ ಗದ್ದೆಯೊಂದರ ಕಾಮಗಾರಿಯನ್ನು ವೀಕ್ಷಿಸಿದ ಬಳಿಕ ಈ ಮಾಹಿತಿ ನೀಡಿದ್ದಾರೆ.
ಕಂಬಳ ತುಳುನಾಡಿನ ಜಾನಪದ ಕ್ರೀಡೆ. ಜೋಡಿ ಕೋಣಗಳನ್ನು ಕೆಸರು ಗದ್ದೆಯಲ್ಲಿ ಸ್ಪರ್ಧೆಗಿಳಿಸುವುದಾಗಿದೆ. ಹೊನಲು ಬೆಳಕಿನ ಸ್ಪರ್ಧೆಯೂ ನೆಯುವುದು. ಕನೆ ಹಲಗೆ, ಎರಡು ಜೋಡಿ ಕೋಣಗಳ ಓಟ ಹೀಗೆ ಹಲವು ವಿಭಾಗಗಳಲ್ಲಿ ಸ್ಪರ್ಧೆಯು ನಡೆಯುತ್ತದೆ. ನವೆಂಬರ್ 26 ಕ್ಕೆ ಆರಂಭವಾಗಲಿರುವ ಕಂಬಳ ಕ್ರೀಡೆಯು ಎಪ್ರಿಲ್ 8 ರ ವರೆಗೆ ನಡೆಯಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


