ಮಂಗಳೂರು: ಕರಾವಳಿಯಲ್ಲಿ ಮತ್ತೆ ನೆತ್ತರು ಹರಿದಿದ್ದು, ಬಿಜೆಪಿ ಯುವ ಮೋರ್ಚಾ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಮೃತ ಪ್ರವೀಣ್ ನೆಟ್ಟಾರು ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದರು. ಪ್ರವೀಣ್ ನೆಟ್ಟಾರು ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದನು. ಬೆಳ್ಳಾರೆ ಪೇಟೆಯಲ್ಲಿ ಇಂದು ತನ್ನ ಕೋಳಿ ಅಂಗಡಿ ಮುಚ್ಚುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿದ್ದಾರೆ.
ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್ ನೆಟ್ಟಾರು ಮೃತದೇಹದ ಮರಣೋತ್ತರ ಪುತ್ತೂರಿನಲ್ಲಿ ನಡೆಸಲಾಗಿದ್ದು, ಮೃತದೇಹವನ್ನು ಪ್ರವೀಣ್ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
ಪುತ್ತೂರು ಸರ್ಕಾರಿ ಆಸ್ಪತ್ರೆಯಿಂದ ಪ್ರವೀಣ್ ಮೃತದೇಹವನ್ನು ಹುಟ್ಟೂರು ನೆಟ್ಟಾರು ಕಡೆಗೆ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಲಾಗುತ್ತಿದ್ದು, ಮೆರವಣಿಗೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದಾರೆ.
ನೆಟ್ಟಾರುವಿನಲ್ಲಿರುವ ಪ್ರವೀಣ್ ಮನೆಯ ಹಿಂಬದಿಯಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ಅಂತ್ಯಕ್ರಿಯೆಗೆ ಎಲ್ಲ ಸಿದ್ಧತೆ ನಡೆಯುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz