ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಜಾಮೀನು ನಿರಾಕರಿಸಿ ಬೆಂಗಳೂರಿನ ಹೈಕೋರ್ಟ್ ಆದೇಶ ಹೊರಡಿಸಿದೆ.
ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಚ್. ಬಿ. ಪ್ರಭಾಕರ್ ಶಾಸ್ತ್ರಿ ಮತ್ತು ಅನಿಲ್ ಕೆ. ಕಟ್ಟಿ ಅವರಿದ್ದ ವಿಭಾಗೀಯ ಪೀಠ ಅರ್ಜಿ ತಿರಸ್ಕರಿಸಿ ಆದೇಶಿಸಿದೆ.
ಮೇಲ್ಮನವಿ ಸಲ್ಲಿಸಿರುವ ಆರೋಪಿಗಳು ಪ್ರಕರಣದಲ್ಲಿ ಸಕ್ರಿಯ ಪಾತ್ರ ವಹಿಸುವುದನ್ನು ತೋರಿಸಲು ಸೂಕ್ತ ಸಾಕ್ಷ್ಯಧಾರಗಳು ಲಭ್ಯವಿದೆ. ದಾಳಿ ವೇಳೆ ಸ್ಥಳದಲ್ಲಿ ಮೂರು ಆರೋಪಿಗಳು ಹಾಜರಿರಲಿಲ್ಲ.


