ತುಮಕೂರು: ಹಿಂದೂ ಸಂಘಟನೆಯ ಹೋರಾಟಗಾರ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ಹಿಂದೂಪರ ಸಂಘಟನೆಗಳಾದ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ತುರುವೇಕೆರೆ ತಾಲೂಕಿನ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಪ್ರತಿಭಟನಾ ನಿರತರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ಮೂಲಕ ಎಸ್ ಡಿ ಪಿ ಐ ಮತ್ತು ಪಿ ಎಫ್ ಐ ಸಂಘಟನೆಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿದರು.
ಬೆಳಗಿನಿಂದಲೇ ಪ್ರಾರಂಭವಾದ ಪ್ರತಿಭಟನೆಯಿಂದಾಗಿ ಭಾಗಶಃ ಅಂಗಡಿ ಮುಂಗಟ್ಟು ಗಳು ಮುಚ್ಚಿದವು. ಪ್ರತಿಭಟನಾಕಾರರು ಹಿಂದೂಪರ ಸಂಘಟನೆಯ ಸಂಚಾಲಕರಾದ ನವೀನ್ ಬಾಬು ಮತ್ತು ಬಿಜೆಪಿ ಶಾಸಕ ಮಸಾಲ ಜಯರಾಮ್ ನೇತೃತ್ವದಲ್ಲಿ ಬಾಣಸಂದ್ರ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಪಿ ಎಫ್ ಐ ಮತ್ತು ಎಸ್ ಡಿ ಪಿ ಐ ಸಂಘಟನೆ ಗಳ ಪ್ರತಿ ಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ 40ಕ್ಕೂ ಹೆಚ್ಚು ಪೊಲೀಸರು ಹಾಗೂ ನಾಲ್ಕು ಪಿಎಸ್ ಐ ಹಾಗೂ ಓರ್ವ ಸರ್ಕಲ್ ಇನ್ಸ್ ಪೆಕ್ಟರ್ ಮೂಲಕ ಸರ್ಪಗಾವಲು ಹಾಕಲಾಗಿತ್ತು.
ವರದಿ: ಸುರೇಶ್ ಬಾಬು ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz