ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಆರ್ಭಟ ಇನ್ನೂ ಮುಂದುವರಿಯಲಿದೆ. ಚಂಡಮಾರುತದ ಹಿನ್ನಲೆ, ಇಂದು 18 ಜಿಲ್ಲೆಗಳಿಗೆ ಮಳೆಯಾಗಲಿದೆ. ನಾಳೆಯಿಂದ ಮಳೆ ಪ್ರಮಾಣ ಕಡಿಮೆಯಾದರೂ ಕೆಲವು ಜಿಲ್ಲೆಗಳಿಗೆ ಮಳೆ ಅಲರ್ಟ್ ನೀಡಲಾಗಿದೆ.
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಏಪ್ರಿಲ್ 17, ಗುರುವಾರವೂ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ನಗರದಲ್ಲಿ ಭಾರೀ ಮಳೆಯಿಂದಾಗಿ ಸಂಚಾರಕ್ಕೆ ಅಡ್ಡಿಯಾಗಿದೆ, ಹವಾಮಾನ ವೈಪರೀತ್ಯದಿಂದಾಗಿ ಹಲವಾರು ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ, ಗದಗ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗಳಲ್ಲಿ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಶಿವಮೊಗ್ಗ, ಬಳ್ಳಾರಿ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವಾಮಾನವಿರುತ್ತದೆ.
ಏಪ್ರಿಲ್ 16–19 ರವರೆಗೆ ನಗರವು ಪ್ರಧಾನವಾಗಿ ಮೋಡ ಕವಿದ ವಾತಾವರಣದೊಂದಿಗೆ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 16 ರ ಬುಧವಾರ ಭಾಗಶಃ ಮೋಡ ಕವಿದ ವಾತಾವರಣ ಮತ್ತು ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿತ್ತು. ಬುಧವಾರದಿಂದ ಮುಂದಿನ ಮೂರು ದಿನಗಳವರೆಗೆ (ಏಪ್ರಿಲ್ 17,18,19), ಮೋಡ ಕವಿದ ವಾತಾವಾರಣವಿದ್ದು, ಹಗುರ ಮಳೆಯಾಗುವ ನಿರೀಕ್ಷೆಯಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————