ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸಿವೆ, ಈ ನಡುವೆ ನ್ಯಾಷನಲ್ ಕಾನ್ಫರೆನ್ಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ, ಅತಂತ್ರ ಫಲಿತಾಂಶ ತಪ್ಪಿಸಲು ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಲಾಗಿದೆ ಎಂದು ಹೇಳಿದ್ದಾರೆ.
ಸೀಟು ಹಂಚಿಕೆ ಒಪ್ಪಂದದ ಪ್ರಕಾರ ನ್ಯಾಷನಲ್ ಕಾನ್ಫರೆನ್ಸ್ 51, ಕಾಂಗ್ರೆಸ್ 32 ಮತ್ತು ಸಿಪಿಐ(ಎಂ) ಒಂದು ಸ್ಥಾನದಲ್ಲಿ ಸ್ಪರ್ಧಿಸುತ್ತಿದೆ. ಉಳಿದ ಆರು ಸ್ಥಾನಗಳಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಡುವೆ ಮೈತ್ರಿ ಏರ್ಪಟ್ಟಿದೆ.
ದಾಲ್ ಲೇಕ್ ಬಳಿ ಶಿಕಾರಾ ರಾಲಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಒಮರ್ ಅಬ್ದುಲ್ಲಾ, ಬಿಜೆಪಿಯವರು ಏನು ತಂತ್ರ ಹೆಣೆಯುತ್ತಾರೆ ಎಂದು ನಮಗೆ ಗೊತ್ತಿಲ್ಲ, ಆದರೆ ಅತಂತ್ರ ವಿಧಾನಸಭೆ ಚುನಾವಣೆ ಫಲಿತಾಂಶ ಬರದಂತೆ ನಾವು ಜಾಗ್ರತೆ ವಹಿಸುತ್ತಿದ್ದೇವೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q