ತುಮಕೂರು: ಜಿಲ್ಲಾಡಳಿತದಿಂದ ನಗರದಲ್ಲಿ ಅಕ್ಟೋಬರ್ 11 ಮತ್ತು 12 ರಿಂದ ಎರಡು ದಿನಗಳ ಕಾಲ ನಡೆಯುವ ತುಮಕೂರು ‘ದಸರಾ 2024’ರ ಆನೆಯೊಂದಿಗೆ ಜಂಬೂಸವಾರಿ ಮಾರ್ಗವನ್ನು ಜಿಲ್ಲಾಧಿಕಾರಿಯ ಶುಭ ಕಲ್ಯಾಣ ಪರಿಶೀಲನೆ ನಡೆಸಿದರು.
ತುಮಕೂರು ನಗರದ ಟೌನ್ ಹಾಲ್ ವೃತ್ತದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್ ಅರಣ್ಯ ಉಪ ಸಂರಕ್ಷಣಾಧಿಕಾರಿ ಅನುಪಮಾ ಮುಜರಾಯಿ ತಹಶೀಲ್ದಾರ್ ಸವಿತಾ ಅವರೊಂದಿಗೆ ಎಂಜಿ ರಸ್ತೆ ಸೇರಿದಂತೆ ಜಬ್ಬುಸವಾರಿ ಸಾಗುವ ಮಾರ್ಗದಲ್ಲಿ ಕಾಲ್ನಡಿಗೆ ಮೂಲಕ ಸಾಗಿದರು.
ಈ ಬಾರಿ ಜಿಲ್ಲಾಡಳಿತದ ವತಿಯಿಂದಲೇ ಅದ್ದೂರಿ ದ ಸರ ಕಾರ್ಯಕ್ರಮವನ್ನು ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು ಎಂಬ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹೆಚ್ಚಿನ ಮುಂಜಾಗ್ರತ ಕ್ರಮವನ್ನು ಕೈಗೊಂಡಿದೆ.
ಪ್ರತಿ ವರ್ಷವೂ ದಸರಾ ಸಮಿತಿ ನೇತೃತ್ವದಲ್ಲಿ ದಸರಾ ಮಹೋತ್ಸವವನ್ನು ಆ ಯೋಜನೆ ಮಾಡಲಾಗುತ್ತಿತ್ತು ಆದರೆ ಈ ಬಾರಿ ಸಂಪೂರ್ಣವಾಗಿ ಜಿಲ್ಲಾಡಳಿತ ಈ ಮಹೋತ್ಸವವನ್ನು ಆ ಯೋಜನೆ ಮಾಡಲು ಕೈಗೆತ್ತಿಕೊಂಡಿದೆ. ಇತ್ತೀಚೆಗಷ್ಟೇ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ಅವರು ಕೂಡ ಮಹೋತ್ಸವ ಆಚರಣೆಗೆ ಜಿಲ್ಲಾಡಳಿತದ ವತಿಯಿಂದ ಪೂರಕ ಕ್ರಮ ಕೈಗೊಳ್ಳುವುದಾಗಿ ಘೋಷಣೆ ಮಾಡಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q