ಚಿಕ್ಕಬಳ್ಳಾಪುರ: ಪ್ರೀತಿಸಿ ಮದುವೆಯಾಗಿದ್ದ ಯುವತಿಯೊಬ್ಬರು ನಾಲ್ಕೇ ದಿನದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಯಲ್ಲಿ ನಡೆದಿದೆ.
ವರದಿಗಳ ಪ್ರಕಾರ ಯುವತಿ ಬಾಗೆಪಲ್ಲಿಯ ಲಾಡ್ಜ್ ವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಯುವತಿಯ ಆತ್ಮಹತ್ಯೆಗೆ ಕಾರಣಗಳೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ.
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಅಟ್ಟಹಳ್ಳಿ ನಿವಾಸಿಯಾಗಿರುವ 25 ವರ್ಷದ ಯುವತಿ ಯಲಹಂಕದ ಬಾಗಲೂರು ಕ್ರಾಸ್ ನಿವಾಸಿಯಾಗಿರುವ ಯುವಕನನ್ನು ಪ್ರೀತಿಸಿ ನಾಲ್ಕು ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದಳು ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಬಾಗೇಪಲ್ಲಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700