ಬೀದರ್: ಬೀದರ್ ಜಿಲ್ಲೆಯಲ್ಲಿ ತಲೆನೋವಿನಿಂದ ಬೇಸತ್ತು ಗರ್ಭಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೀರ್ತಿ ರಾಮು(22) ಮೃತ ಗರ್ಭಿಣಿಯಾಗಿದ್ದಾಳೆ.
7 ತಿಂಗಳ ಗರ್ಭಿಣಿಯಾಗಿದ್ದ ಕೀರ್ತಿರಾಮು ಅವರು ಹಲವು ತಿಂಗಳುಗಳಿಂದ ತೀವ್ರವಾದ ತಲೆನೋವಿನಿಂದ ಬಳಲುತ್ತಿದ್ದರು. ಎಷ್ಟೇ ಚಿಕಿತ್ಸೆ ಮಾಡಿದರೂ ಗುಣವಾಗುತ್ತಿರಲಿಲ್ಲ. ಇದರಿಂದ ಬೇಸತ್ತು ಕೀರ್ತಿರಾಮು ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಾವಿಗೆ ಬಿದ್ದ ಗರ್ಭಿಣಿಯ ಮೃತದೇಹವನ್ನು ಪೊಲೀಸರು ಮೇಲೆಕ್ಕಿತ್ತಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಕುರಿತು ಹುಮ್ನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


