ತುಮಕೂರು: ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿ ಪಿ.ಓ.ಪಿ ನಿರ್ಮಿತ ಹಾಗೂ ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ ಗೌರಿ/ಗಣೇಶ ವಿಗ್ರಹ ಮತ್ತು ಬಣ್ಣಲೇಪಿತ ವಿಗ್ರಹಗಳ ಮಾರಾಟ ಮತ್ತು ವಿಸರ್ಜನೆ ಮಾಡುವುದನ್ನು ನಿಷೇಧಿಸಿದೆ ಎಂದು ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ತಿಳಿಸಿದ್ದಾರೆ.
ಬರುವ ಸೆಪ್ಟೆಂಬರ್ 6ರ ಸ್ವರ್ಣಗೌರಿ ವ್ರತ ಮತ್ತು ಸೆಪ್ಟೆಂಬರ್ 7ರಂದು ಆಚರಿಸುವ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಗೌರಿ/ಗಣೇಶ ವಿಗ್ರಹಗಳನ್ನು ತಯಾರಿಸುವ ಮಾಲೀಕರು ಮತ್ತು ಮಾರಾಟಗಾರರು ಸಂಪೂರ್ಣವಾಗಿ ಮಣ್ಣಿನಿಂದ ತಯಾರಿಸಿರುವ ವಿಗ್ರಹಗಳನ್ನು ಮಾತ್ರ ಮಾರಾಟ ಮಾಡಬೇಕು. ತಪ್ಪಿದಲ್ಲಿ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


