ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಜಾಮೀನಿನ ಮೇಲೆ ಕಾರಾಗೃಹದಿಂದ ಬಿಡುಗಡೆಯಾಗಿರುವ ಸಂಘ ಪರಿವಾರದ ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿ ಶೀಟ್ ತೆರೆಯಲು ಚಾಮರಾಜಪೇಟೆ ಠಾಣಾ ಪೊಲೀಸರು ಪ್ರಕ್ರಿಯೆ ಆರಂಭಿಸಿದ್ದಾರೆ.
ಇಲ್ಲಿನ ಚಾಮರಾಜಪೇಟೆ, ರಾಮನಗರ ಹಾಗೂ ವಿಜಯನಗರ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ಗಲಭೆ, ದೊಂಬಿ, ಕೊಲೆ ಬೆದರಿಕೆ ಹಾಗೂ ಹಲ್ಲೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ಹಿನ್ನೆಲೆಯಲ್ಲಿ ಆತನ ವಿರುದ್ಧ ರೌಡಿಶೀಟ್ ತೆರೆಯಲು ವರದಿ ಸಲ್ಲಿಸಲಾಗಿದೆ.
ಈ ಸಂಬಂಧ ಚಿಕ್ಕಪೇಟೆ ಉಪವಿಭಾಗ ಎಸಿಪಿ ಕೆರೆಹಳ್ಳಿಗೆ ನೊಟೀಸ್ ಜಾರಿ ಮಾಡಿದ್ದಾರೆ. ದೊಂಬಿ, ಕೊಲೆ, ಹಲ್ಲೆ, ಜೀವ ಬೆದರಿಕೆ ಹಾಗೂ ಇನ್ನಿತರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿರುವ ನಿಮ್ಮ ವಿರುದ್ಧ ಏಕೆ ರೌಡಿಪಟ್ಟಿ ತೆರೆಯಬಾರದು ಎಂಬುದಕ್ಕೆ ಕೂಡಲೇ ವಿವರಣೆ ಸಲ್ಲಿಸಬಹುದು.
ವಿವರಣ ನೀಡದಿದ್ದಲ್ಲಿ ಏನು ಇಲ್ಲವೆಂದು ಪರಿಗಣಿಸಿ ರೌಡಿಪಟ್ಟಿ ತೆರೆಯಲಾಗುವುದು ಎಂದು ಪುನೀತ್‌ಗೆ ನೋಟಿಸ್ ಜಾರಿ ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA