ಕೋಲ್ಕತ್ತ: ವೈದ್ಯೆಯ ಹತ್ಯೆ, ಅತ್ಯಾಚಾರ ಪ್ರಕರಣವನ್ನು ಸಹಿಸುವುದು ಅಸಾಧ್ಯ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.
ಸುದ್ದಿ ಸಂಸ್ಥೆ ಪಿಟಿಐನೊಂದಿಗೆ ಮಾತನಾಡಿರುವ ಅವರು, ಕೋಲ್ಕತ್ತಾದಲ್ಲಿ ನಡೆದ ವೈದ್ಯೆಯ ಹತ್ಯೆ, ಅತ್ಯಾಚಾರ ಪ್ರಕರಣದ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
ಇಂತಹ ಪ್ರಕರಣಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿರುವ ರಾಷ್ಟ್ರಪತಿಗಳು, ಮಹಿಳೆಯರ ವಿರುದ್ಧದ ಇಂತಹ ಘೋರ ಅಪರಾಧಗಳನ್ನು ತಡೆಗಟ್ಟಲು ಸಾಮಾಜಿಕ ಪರಿಷ್ಕರಣೆಯ ತುರ್ತು ಅಗತ್ಯವಿದೆ ಎಂದು ಹೇಳಿದ್ದಾರೆ.
ಕೋಲ್ಕತ್ತಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಮೊದಲ ಬಾರಿಗೆ ಸಾರ್ವಜನಿಕವಾಗಿ ಪ್ರತಿಕ್ರಿಯೆ ನೀಡಿರುವ ರಾಷ್ಟ್ರಪತಿಗಳು, ಕೋಲ್ಕತ್ತಾದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ತನ್ನ ಬೆಂಬಲವನ್ನು ವ್ಯಕ್ತಪಡಿಸಿದರು ಮತ್ತು ತ್ವರಿತ ನ್ಯಾಯಕ್ಕಾಗಿ ಕರೆ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q