ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಗಂಭೀರ ಆರೋಪ ಮಾಡಿ ಸರ್ಕಾರವನ್ನೇ ನಡುಗಿಸಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84) ಗುರುವಾರ ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದಲೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಮೊನ್ನೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಮನೆಗೆ ಬಂದಿದ್ದರು. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಅವರು ತಮ್ಮ ಮನೆಯಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಸಿಎಂ ಸಿದ್ದರಾಮಯ್ಯ ಸಂತಾಪ!
ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ 40% ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು.
ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ ಧ್ವನಿಯೊಂದನ್ನು ನಾಡು ಇಂದು ಕಳೆದುಕೊಂಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q