ತುಮಕೂರು: ಸಮಾಜ ಕಲ್ಯಾಣ ಇಲಾಖೆಯು ಜಿಲ್ಲಾ ವ್ಯಾಪ್ತಿಯಲ್ಲಿರುವ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಕಲ್ಪಿಸಲು 5ನೇ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪ.ಜಾತಿಯ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಭರ್ತಿ ಮಾಡಿದ ಅರ್ಜಿಯನ್ನು ವಿದ್ಯಾರ್ಥಿಯ ಆಧಾರ್ ನಂಬರ್, ಜಾತಿ/ಆದಾಯ ಪ್ರಮಾಣ ಪತ್ರ, 5ನೇ ತರಗತಿ ಅಂಕಪಟ್ಟಿ, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಮತ್ತಿತರೆ ಅಗತ್ಯ ದಾಖಲೆಗಳೊಂದಿಗೆ ಮೇ 3ರೊಳಗಾಗಿ ಜಾಲತಾಣ www.sw.kar.nic.in ಮೂಲಕ ಸಲ್ಲಿಸಬಹುದಾಗಿದೆ. ನಿಗದಿತ ಅರ್ಜಿ ನಮೂನೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆಯ ಮೂಲಕ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಸ್. ಕೃಷ್ಣಪ್ಪ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW