ತುಮಕೂರು: ಕೊರಟಗೆರೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲಾ ವ್ಯಾಪ್ತಿಯಲ್ಲಿರುವ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಕಲ್ಪಿಸಲು 5ನೇ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಗೆ ಸೇರಿದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಭರ್ತಿ ಮಾಡಿದ ಅರ್ಜಿಯನ್ನು ಮೇ 3ರೊಳಗಾಗಿ ಜಾಲತಾಣ www.sw.kar.nic.in ಮೂಲಕ ಸಲ್ಲಿಸಬಹುದಾಗಿದೆ. ನಿಗದಿತ ಅರ್ಜಿ ನಮೂನೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ/ ಕೊರಟಗೆರೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕಚೇರಿ/ ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ.
ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳನ್ನು ಅರ್ಹತಾ ಪರೀಕ್ಷೆಯ ಮೂಲಕ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅರ್ಹತಾ ಪರೀಕ್ಷೆಯನ್ನು ಮೇ 9ರಂದು ತುಮಕೂರು ನಗರದ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ(ಬ್ಯಾಂಕ್ ರಸ್ತೆ, ಡಿಸಿಸಿ ಬ್ಯಾಂಕ್ ಎದುರು)ಯಲ್ಲಿ ನಡೆಸಲಾಗುವುದು ಎಂದು ಕೊರಟಗೆರೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ(ಗ್ರೇಡ್–2) ಜಿ. ಯಮುನಾ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW