ಬೀದರ್ ತಾಲೂಕಿನ ಸೋಲಪೂರ್ ಗ್ರಾಮದ ಕೆರೆಯ ಸಮೀಪದಲ್ಲಿ ಮದುವೆ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ (Lover) ತಾನು ಪ್ರೀತಿಸುತ್ತಿದ್ದ ಹುಡುಗಿಯ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ನಡೆದಿದೆ.
ಶಿವಲೀಲಾ (18) ಕೊಲೆಯಾಗಿರುವ ಯುವತಿ. ಈಕೆ ಬ್ರೀಮ್ಸ್ನಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದಳು. ಇನ್ನೂ ಶ್ರೀನಿವಾಸ ಎಂಬಾತ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.
ಮದುವೆಯಾಗಲು (Marriage) ಇಷ್ಟವಿಲ್ಲ ಎಂದು ಹೇಳಿದ್ದಕ್ಕೆ ಶ್ರೀನಿವಾಸ ಸೋಲಪೂರ್ ಕೆರೆಯ ಬಳಿ ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಆರೋಪಿ ಶ್ರೀನಿವಾಸ ಚಾಂಬೋಳ ಗ್ರಾಮದ ನಿವಾಸಿ. ಶಿವಲೀಲಾ ಮಲ್ಲಿಕ್ ಮಿರ್ಜಾಪೂರ್ ಗ್ರಾಮದ ಹುಡುಗಿ. ಬೀದರ್ ನಗರದ ಮಂಗಲ್ ಪೇಟೆಯಲ್ಲಿ ತಾಯಿಯೊಂದಿಗೆ ವಾಸವಾಗಿದ್ದಳು. ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಶ್ರೀನಿವಾಸನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಈ ಕುರಿತು ಬೀದರ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


