ಸರ್ಕಾರಿ ಕೆಲಸಕ್ಕೆ ಯುವತಿಯರು ಮಂಚ ಹತ್ತಬೇಕು ಎಂದು ಹೇಳಿಕೆ ನೀಡಿರುವ ಕಾಂಗ್ರೆಸ್ ಶಾಸಕ ಪ್ರಿಯಾಂಕಖರ್ಗೆ ಅವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ರಾಜ್ಯ ಬಿಜೆಪಿ ಆಗ್ರಹಿಸಿದೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಸಾವಿರಾರು ಮಹಿಳೆಯರು, ಪ್ರತಿಭಾವಂತರು, ವಿದ್ಯಾವಂತರು ಕಷ್ಟಪಟ್ಟು ಅನೇಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಕೆಲಸ ಗಿಟ್ಟಿಸಿಕೊಳ್ಳುತ್ತಾರೆ. ಪ್ರಿಯಾಂಕಖರ್ಗೆ ಅವರೇ ನಿಮ್ಮ ಈ ಮಾತು ಅಷ್ಟೂ ಜನ ಮಹಿಳೆಯರಿಗೆ ಅವಮಾನ ಮಾಡಿದಂತಲ್ಲವೇ? ಕೂಡಲೇ ಕ್ಷಮೆಯಾಚಿಸಿ ಎಂದು ಬಿಜೆಪಿ ಒತ್ತಾಯಿಸಿದೆ.
ಲಂಚ-ಮಂಚದ ಸರ್ಕಾರ ಎಂದು ಆರೋಪ ಮಾಡಿದ್ದ ಮಾಜಿ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ತಮ್ಮ ಮನೆಯ ಹೆಂಚು ತೂತು ಎಂಬುದೇ ಗೊತ್ತಿಲ್ಲ. ಇವರು ಆರೋಪ ಮಾಡಿದ್ದ ಬೆನ್ನಲ್ಲೆ ಜಲಮಾಲಾ ಅವರ ಲಂಚದ ಹಗರಣ ಬಯಲಾಗಿದೆ, ಹಾಗಾದರೆ ಲಂಚದ ಸರ್ಕಾರ ಯಾರದ್ದು ಎಂದು ಬಿಜೆಪಿ ಪ್ರಶ್ನಿಸಿದೆ.
ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ-ಬಿರಂಗಿ ಬಗ್ಗೆ ಸಾಕಷ್ಟು ದಂತ ಕತೆಗಳು ಮಾತ್ರವಲ್ಲ, ಗುಪ್ತ ಸಿಡಿಗಳೂ ಇವೆ, ಜ್ಯೂನಿಯರ್ ಖರ್ಗೆ ಅವರೇ ಸಭ್ಯಸ್ಥರ ಮುಖವಾಡ ಹಾಕಿ ಸಮಾಜದ ಕಣ್ಣಿಗೆ ಗಣ್ಯರೆಂದು ಬಿಂಬಿಸಿಕೊಂಡ ಕಾಂಗ್ರೆಸ್, ಗೋಮುಖ ವ್ಯಾಘ್ರಗಳ ಪಟ್ಟಿ ನೀಡಿದರೆ ಸಮರ್ಥನೆ ಮಾಡಿಕೊಳ್ಳುವುದಕ್ಕೂ ನಿಮಗೆ ಕಷ್ಟವಾಗಬಹುದು ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಪ್ರಿಯಾಂಕಖರ್ಗೆ ಅವರೇ ಸಹಾಯ ಮಾಡುವುದಾಗಿ ನಂಬಿಸಿ, ಅಸಹಾಯಕ ಹೆಣ್ಣು ಮಗಳ ಮೇಲೆ ಹೆಚ್.ವೈ ಮೇಟಿ ಲೈಂಗಿಕ ದೌರ್ಜನ್ಯವೆಸಗಿದ್ದು ನಿಮ್ಮ ಕಾಲದಲ್ಲಿ ಅಲ್ಲವೇ? ಎಂದು ಪ್ರಶ್ನಿಸಿರುವ ಬಿಜೆಪಿ, ಯುಪಿಎ ಸರ್ಕಾರದಲ್ಲಿ ಮಹಿಳೆಯರ ಮೇಲೆ ನಡೆಸಿದ ’ದಿಗ್ವಿಜಯ’, ’ಅಭಿಷೇಕ’ಗಳ ಸಿಡಿ ನಿಮ್ಮ ಮಂಚದ ಸರ್ಕಾರದ ಫಲವಲ್ಲವೇ? ಎಂದು ಪ್ರಶ್ನಿಸಿರುವ ಬಿಜೆಪಿ, ಮಹಿಳಾ ವಿರೋಧಿ ಕಾಂಗ್ರೆಸ್ ಎಂದು ಟೀಕಿಸಿದೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy