ಕಲಬುರಗಿ : ಶಾಸಕ ಪ್ರಿಯಾಂಕ್ ಖರ್ಗೆಯನ್ನ ಶೂಟ್ ಮಾಡುವುದಾಗಿ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನು ಪೊಲೀಸರು ಬಂಧಿಸಿದ್ದಾರೆ.
ನೀವು ಶೂಟ್ ಮಾಡಿ ನಾವು ಸಾಯೋಕು ರೆಡಿ ಇದ್ದೀವಿ. ನಾವೂ ನಿಮಗೆ ಶೂಟ್ ಮಾಡೋಕೂ ರೆಡಿ ಇದ್ದೀವಿ ಎಂದು ಮಣಿಕಂಠ ರಾಠೋಡ್ ಹೇಳಿದರು. ಈ ಕುರಿತು ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮಣಿಕಂಠ ಬಂಧನಕ್ಕಾಗಿ ಕಾಂಗ್ರೆಸ್ ಕೂಡ ಆಗ್ರಹಿಸಿತ್ತು. ಕಲಬುರಗಿ ಎಸ್ ಪಿ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿತ್ತು. ಭಾನುವಾರ ಮಧ್ಯರಾತ್ರಿ ಹೈದರಾಬಾದ್ ನಲ್ಲಿ ಪೊಲೀಸರು ಬಂಧಿಸಿ ಕಲಬುರಗಿಗೆ ಕರೆ ತಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy