nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026
    Facebook Twitter Instagram
    ಟ್ರೆಂಡಿಂಗ್
    • ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು
    • ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ
    • ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ
    • ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!
    • ಹೊಳೆನರಸೀಪುರ: ಕುಪ್ಪೆ ಗ್ರಾಮದಲ್ಲಿ ಕತ್ತಲೆಯಲ್ಲಿ ಮುಳುಗಿದ ಪ್ರಮುಖ ವೃತ್ತಗಳು; 35 ದಿನ ಕಳೆದರೂ ಕಣ್ಣುಮುಚ್ಚಿ ಕುಳಿತ ಪಿಡಿಒಗಳು!
    • ಹೊಳೆನರಸೀಪುರ: ತಾತನಹಳ್ಳಿ ಡೈರಿ ಅವ್ಯವಸ್ಥೆ – ಸಾವಿರಾರು ಲೀಟರ್ ಹಾಲು ಹಾಳು, ರೈತರಿಂದ ಆಕ್ರೋಶಭರಿತ ಪ್ರತಿಭಟನೆ
    • ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್
    • ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರು: ಪ್ರೇಯಸಿಯ ಅಶ್ಲೀಲ ವಿಡಿಯೋ ಪೋಸ್ಟ್- ಪ್ರಿಯಕರನ ಕೊಲೆ!
    Uncategorized September 19, 2022

    ಬೆಂಗಳೂರು: ಪ್ರೇಯಸಿಯ ಅಶ್ಲೀಲ ವಿಡಿಯೋ ಪೋಸ್ಟ್- ಪ್ರಿಯಕರನ ಕೊಲೆ!

    By adminSeptember 19, 2022No Comments2 Mins Read
    banglore

    ಬೆಂಗಳೂರು, ಸೆಪ್ಟೆಂಬರ್ 19: ಪ್ರೀತಿ ಹುಟ್ಟುವುದು ನಂಬಿಕೆಯ ಮೇಲೆಯೇ. ಪ್ರೀತಿಸುವ ಮುಗ್ದ ಮನಸ್ಸುಗಳನ್ನು ಒಬ್ಬರನ್ನೊಬ್ಬರ ನಂಬಿಕೆಯನ್ನಿಟ್ಟು ವಿಶ್ವಾಸವನ್ನು ಹೊಂದಿದ ಮೇಲೆಯ ಪ್ರೀತಿಯ ಹಾದಿಯಲ್ಲಿ ಸಲುಗೆ ಅನ್ನೋದು ಬೆಳೆಯುತ್ತೆ. ಸಲುಗೆ ಬೆಳೆಸಿದ ಪ್ರೇಮಿಯೊಬ್ಬ ತನ್ನ ಪ್ರೇಯಸಿಯ ಅಶ್ಲೀಲ ವಿಡಿಯೋ ಸೆರೆಹಿಡಿದು ಇನ್ಸ್ಟಾದಲ್ಲಿ ಹಾಕಿದ್ದಕ್ಕೆ ಕೊಲೆಯಾಗಿದ್ದಾನೆ.

    ಪ್ರೀತಿಸಿದ್ದ ಹುಡುಗಿಯ ಮಾನವನ್ನು ಕಾಪಾಡಬೇಕಾಗಿದ್ದು ಪ್ರಿಯಕರನ ಕರ್ತವ್ಯ ಆಗಿರುತ್ತದೆ. ಆದರೆ ಪ್ರೀತಿಸಿದಾಕೆಯ ಅಶ್ಲೀಲ ಫೋಟೋಗಳನ್ನು ಮತ್ತು ವಿಡಿಯೋವನ್ನು ತೆಗೆದುಕೊಂಡಿದ್ದ ಪ್ರಿಯಕರ ಆಕೆಯ ಫೋಟೋವನ್ನು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿ ವಿಕೃತವಾದ ಆನಂದವನ್ನು ಹೊಂದಿದ್ದ. ಇದರಿಂದ ಪ್ರಿಯಕರನ ಜೊತೆಗೆ ಪ್ರೇಯಸಿ ಜಗಳವನ್ನುಆಡಿದ್ದಳು.

    ಪ್ರಿಯಕರನ ಕೃತ್ಯದಿಂದ ಬೇಸತ್ತಿದ್ದ ಪ್ರಿಯತಮೆ ತನ್ನ ಸ್ನೇಹಿತರ ಜೊತೆ ಸೇರಿ ಪ್ರಿಯಕರನನ್ನು ಹತ್ಯೆಗೈದಿರುವ ಘಟನೆ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಮೈಕೋ ಲೇಔಟಿನಲ್ಲಿ ನಡೆದಿದೆ. ತನ್ನ ಪ್ರೇಯಸಿಯ ಅಶ್ಲೀಲ ಫೋಟೋವನ್ನು ಇನ್ಸ್ಟಾದಲ್ಲಿ ಹಾಕಿದ್ದ ತಪ್ಪಿಗೆ ಪ್ರೇಯಸಿ ಮತ್ತು ಆಕೆಯ ಸ್ನೇಹಿತರಿಂದ ಡಾ.ವಿಕಾಸ್ ಎಂಬಾತ ಕೊಲೆಯಾಗಿದ್ದಾನೆ. ಪ್ರತಿಭಾ,ಸುಶೀಲ್, ಗೌತಮ್ ಮತ್ತು ಸೂರ್ಯ ಕೊಲೆಗೈದಿರುವ ಆರೋಪಿಗಳಾಗಿದ್ದು. ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸೂರ್ಯ ಎಂಬ ಆರೋಪಿ ತಲೆ ಮರೆಸಿಕೊಂಡಿದ್ದಾನೆ.

    ಪ್ರೇಯಸಿ, ಆಕೆಯ ತಾಯಿಯ ಅಶ್ಲೀಲ ಫೋಟೋ ಪೋಸ್ಟ್

    (ಕೊಲೆಯಾದ ಡಾ. ವಿಕಾಸ್) ಉಕ್ರೇನ್ ನಲ್ಲಿ ವೈದ್ಯಕೀಯ ಶಿಕ್ಷಣ ಮುಗಿಸಿದ್ದ ವಿಕಾಸ್ ಚೆನ್ನೈ ನಲ್ಲಿ ವೈದ್ಯನಾಗಿ ಕೆಲಸ ಮಾಡಿಕೊಂಡಿದ್ದ. ಪ್ರತಿಭಾ ಹಾಗೂ ವಿಕಾಸ್ ಪರಸ್ಪರ ಪ್ರೀತಿಸುತ್ತಿದ್ದು ಕೆಲದಿನಗಳ ಹಿಂದೆ ಎರಡೂ ಕುಟುಂಬದಿಂದಲೂ ನವೆಂಬರ್‌ನಲ್ಲಿ ಮದುವೆಗೆ ಸಮ್ಮತಿ ಸಿಕ್ಕಿತ್ತು. ಈ ನಡುವೆ ಪ್ರತಿಭಾ ಹಾಗೂ ಆಕೆಯ ತಾಯಿಯ ಅಶ್ಲೀಲ ಫೋಟೊ ಮತ್ತು ವಿಡಿಯೋಗಳನ್ನ ಸೆರೆಹಿಡಿದಿದ್ದ ವಿಕಾಸ್ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ.

    ಜಗಳದ ಬಳಿಕ ಮಾತುಕತೆ ಆಹ್ವಾನ

    ವೈದ್ಯ ವಿಕಾಸ್ ತನ್ನ ಪ್ರೇಯಸಿ ಪ್ರತಿಭಾ ಮತ್ತು ಆಕೆಯ ತಾಯಿಯ ಫೋಟೋವನ್ನು ಇನ್ಸ್ಟಾದಲ್ಲಿ ಪೋಸ್ಟ್‌ ಮಾಡಿದ್ದ. ಈ ವಿಚಾರ ಪ್ರತಿಭಾಗೆ ಗೊತ್ತಾಗುತ್ತದೆ. ತನ್ನ ಅಶ್ಲೀಲ ಫೋಟೋವನ್ನು ಪೋಸ್ಟ್‌ ಮಾಡಿದ್ದಕ್ಕೆ ಆಕ್ಷೇಪವನ್ನು ವ್ಯಕ್ತಪಡಿದ್ದಲ್ಲದೇ ತನ್ನ ತಾಯಿಯ ಫೋಟೋವನ್ನು ಹಾಕಿದ್ದಕ್ಕೆ ಇಬ್ಬರ ನಡುವೆ ಜಗಳವಾಗುತ್ತದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಬೇಕಿದೆ ಎಂದು ಹೇಳಿ ಪ್ರತಿಭಾ ಡಾ. ವಿಕಾಸ್ ನನ್ನು ಕರೆಸಿಕೊಂಡಿದ್ದಾಳೆ.

    ಸ್ನೇಹಿತರ ಮೂಲಕ ಪ್ರಿಯಕರ ವಿಕಾಸ್‌ ಮೇಲೆ ಹಲ್ಲೆ

    ಪ್ರತಿಭಾ ಹಾಗೂ ಆಕೆಯ ಕುಟುಂಬದವರು ವಿಕಾಸ್ ಜೊತೆ ಗಲಾಟೆ ಮಾಡಿಕೊಂಡಿದ್ದರು. ಪ್ರೀತಿಸಿದವನೇ ಮಾಡಿದ ಮೋಸದ ಕುರಿತು ಪ್ರತಿಭಾ ತನ್ನ ಗೆಳೆಯರಾದ ಸುಶೀಲ್, ಗೌತಮ್ ಮತ್ತು ಸೂರ್ಯನ ಬಳಿ ಹೇಳಿಕೊಂಡಿದ್ದಳು. ಮಾತನಾಡುವುದಾಗಿ ಮೂರು ದಿನಗಳ ಹಿಂದೆ ಮೈಕೋಲೇಔಟ್ ಬಳಿ ಕರೆಸಿಕೊಂಡಿದ್ದ ಆರೋಪಿಗಳು ವಿಕಾಸ್ ಮೇಲೆ ಮನಸೋ ಇಚ್ಛೆ ಹಲ್ಲೆಯನ್ನು ಮಾಡಿದ್ದರು. ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿಕಾಸ್ ಮೂರು ದಿನಗಳಿಂದ ಚಿಕಿತ್ಸೆಯನ್ನು ಪಡೆಯುತ್ತಾ ಸಾವು ಬದುಕಿನ ನಡುವೆ ಹೋರಾಟವನ್ನು ನಡೆಸುತ್ತಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಡಾ. ವಿಕಾಸ್ ಸಾವನ್ನಪ್ಪಿದ್ದ.

    ಬೇಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ

    ತನ್ನ ಪ್ರೇಯಸಿಯ ಅಶ್ಲೀಲ ಫೋಟೋವನ್ನು ಇನ್ಸ್ಟಾದಲ್ಲಿ ಹಾಕಿದ್ದ ತಪ್ಪಿಗೆ ಪ್ರೇಯಸಿ ಮತ್ತು ಆಕೆಯ ಸ್ನೇಹಿತರಿಂದ ಡಾ.ವಿಕಾಸ್ ಎಂಬಾದ ಕೊಲೆಯಾಗಿದ್ದಾನೆ. ಪ್ರತಿಭಾ, ಸುಶೀಲ್, ಗೌತಮ್ ಮತ್ತು ಸೂರ್ಯ ಕೊಲೆಗೈದಿರುವ ಆರೋಪಿಗಳಾಗಿದ್ದು. ಪ್ರತಿಭಾ,ಸುಶೀಲ್, ಗೌತಮ್ ಎಂಬ ಮೂವರನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ. ಸೂರ್ಯ ಎಂಬ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಬೇಗೂರು ಪೊಲೀಸರು ಹುಡುಕಾಟ ನಡೆಸುತ್ತಿದ್ದು ತನಿಖೆಯನ್ನು ಮುಂದುವರೆಸಿದ್ದಾರೆ.

    ವರದಿ :ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹೊತ್ತ ಅಧಿಕಾರಿಗಳಿಗೆ ಶಾಕ್!

    September 22, 2026

    ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ: ಕೊರಟಗೆರೆಯಲ್ಲಿ ಅಪರೂಪದ ಪ್ರೀತಿ

    September 21, 2026

    ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

    September 13, 2026

    Comments are closed.

    Our Picks

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಔರಾದ್‌/ಬೀದರ್ : ಗ್ರಾಮೀಣ ಪ್ರದೇಶಗಳಲ್ಲಿ ವಿಬಿ–ಜಿ ರಾಮ್‌ ಜಿ ಯೋಜನೆಯಡಿ ಕೂಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಎನ್‌ ಎಂಎಂಎಸ್‌ (NMMS)…

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026

    ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!

    September 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.