ಬೆಂಗಳೂರು: ನಂದಿನಿ ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚು ಮಾಡಿ ಅದಕ್ಕೆ ತಗುಲುವ ವೆಚ್ಚ 2.00 ರೂ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದರು.
ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸರ್ಕಾರ ಜನರಿಗೆ ಕೊಟ್ಟಿರುವ ಗ್ಯಾರಂಟಿ ಭಾಗ್ಯ ಎಂದು ಹಾಲಿನ ದರ ಏರಿಕೆ ಬಗ್ಗೆ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾಸ್ವಾಮಿ ಅವರು ಮಾಡಿರುವ ಟೀಕೆ ಬಗ್ಗೆ ಪ್ರತಿಕ್ರಿಯೆ ನೀಡಿ ನಾಳೆ ಈ ಬಗ್ಗೆ ಜಾಹೀರಾತು ನೀಡಲಾಗುತ್ತಿದೆ. ಬೆಲೆ ಏರಿಕೆ ಮಾಡಿಲ್ಲ. ಹಾಲಿನ ಪ್ರಮಾಣ ಹೆಚ್ಚು ಮಾಡಿ ಅದಕ್ಕೆ ತಗುಲುವ ವೆಚ್ಚದ ಮೊತ್ತವನ್ನು ಹೆಚ್ಚಿಸಲಾಗಿದೆ ಎಂದರು.
ಹಾಲಿನ ಉತ್ಪಾದನೆ ಜಾಸ್ತಿಯಾಗಿದ್ದು ಮಾರುಕಟ್ಟೆ ವ್ಯವಸ್ಥೆ ಇಲ್ಲದ ಕಾರಣ ಹೆಚ್ಚು ಹಾಲು ನೀಡಿ ದರ ಹೆಚ್ಚಿಸಲಾಗಿದೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


