ಬೆಂಗಳೂರು: ತೈಲ ಬೆಲೆ ಖಂಡಿಸಿ ಪ್ರತಿಭಟಿಸುವ ಹಕ್ಕು ಬಿಜೆಪಿಗಿದೆ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಪೆಟ್ರೋಲ್ ಡೀಸೆಲ್ ದರ ಹೆಚ್ಚಳ ಮಾಡಲಾಗಿದೆ ಎಂದು ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಹಾಗಾದರೆ ಅವರ ಪಕ್ಷ ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ದರ ಎಷ್ಟಿದೆ? ಎಂದರು. ತೈಲ ಬೆಲೆ ಖಂಡಿಸಿ ಬಿಜೆಪಿ ಪ್ರತಿಭಟನೆ ಮಾಡಲಿ. ಅವರಿಗೆ ಪ್ರತಿಭಟಿಸುವ ಹಕ್ಕಿದೆ.
ಜನರ ಸವಾಲುಗಳಿಗೆ ಉತ್ತರ ಕೊಡುವವರು ಯಾರು? ಪೆಟ್ರೋಲ್ ದರವನ್ನು 97ರೂ. ವರೆಗೆ ತಂದವರು ಯಾರು? ಸೆಸ್ಗಳ ಅನುಕೂಲ ಮಾಡಿಕೊಟ್ಟಿದ್ದಾರೆ. ರಷ್ಯಾದಿಂದ ಕಡಿಮೆ ಬೆಲೆಗೆ ತೆಗೆದುಕೊಂಡು ಅದನ್ನು ಜನ ಸಾಮಾನ್ಯರಿಗೆ ಕೊಟ್ಟಿದ್ದೀರಾ? ನಾವು ಕೇವಲ 3ರೂ. ಏರಿಕೆ ಮಾಡಿದ್ದೇವೆ ಅಷ್ಟೇ ಎಂದು ಅವರು ಸರ್ಕಾರದ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಮಹಾರಾಷ್ಟ್ರ, ಆಂದ್ರದಲ್ಲಿ ಎಷ್ಟಿದೆ? ಬಿಜೆಪಿ ಇರುವ ರಾಜ್ಯಗಳಲ್ಲಿ ತೈಲ ಬೆಲೆ ಎಷ್ಟಾಗಿದೆ? ಇವರು ಬೆಲೆ ಏರಿಕೆ ಮಾಡಿದಾಗ ದೇಶ ಕಟ್ಟುವ ಅವಶ್ಯಕತೆ ಇದೆ ಅಂತಾರೆ. ನಾವು ಮಾಡಿದ್ರೆ ದೇಶ ಹಾಳಾಗುತ್ತಾ? ಅಂಕಿ ಅಂಶಗಳನ್ನು ನಾಳೆ ಜನರ ಮುಂದೆ ಇಡುತ್ತೇವೆ. ಆಗ ಎಲ್ಲಾ ವಿಚಾರ ತಿಳಿಯಲಿದೆ ಎಂದು ಅವರು ಕಿಡಿಕಾರಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


