ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ ಹೊನ್ನಾಳಿಯಲ್ಲಿರುವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೆಲವು ತಿಂಗಳುಗಳಿಂದ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಮಧ್ಯೆ ನಡೆಯುತ್ತಿರುವ ಜಗಳ ಮತ್ತಷ್ಟು ತೀವ್ರಗೊಂಡಿದ್ದು ಉಪನ್ಯಾಸಕರು ಪಾಠ ಮಾಡುವುದನ್ನು ನಿಲ್ಲಿಸಿಬಿಟ್ಟಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳು ಹೊರಗಡೆ ಬಂದು ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ವಿಷಯ ಗೊತ್ತಾದ ಕೂಡಲೇ ಕಾಲೇಜಿಗೆ ಧಾವಿಸಿದ ರೇಣುಕಾಚಾರ್ಯಯ, ಪ್ರಾಂಶುಪಾಲರು ಮತ್ತು ಉಪನ್ಯಾಸಕರನ್ರಿನು ತರಾಟೆಗೆ ತೆಗೆದುಕೊಂಡು ನಿಮ್ಮ ಜಗಳಗಳಿಗೆ ಮಕ್ಕಳ ಭವಿಷ್ಯ ಹಾಳು ಮಾಡಬೇಡಿ ಅಂತ ತಾಕೀತು ಮಾಡಿ ಎಲ್ಲರನ್ನು ಒಳಗೆ ಕಳಿಸಿದ್ದಾರೆ.
ನಿಮ್ಮ ಮಧ್ಯೆ ಏನೇ ಸಮಸ್ಯೆಗಳಿದ್ದರೂ ಕುಳಿತು ಮಾತನಾಡಿ ಪರಿಹರಿಸೋಣ, ವಿದ್ಯಾರ್ಥಿಗಳನ್ನು ತಿದ್ದಬೇಕಾದ ನೀವೆ ಈ ರೀತಿ ಮಾಡಿಕೊಂಡರೆ ಹೇಗೆ ಎಂದು ಶಾಸಕರು ಉಪನ್ಯಾಸಕರನ್ನು ಪ್ರಶ್ನಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy