ಗದಗ: ಅಪರಿಚಿತ ವಾಹನ ಡಿಕ್ಕಿಯಾಗಿ ಅರ್ಚಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
ಗಜೇಂದ್ರಗಢ ತಾಲೂಕಿನ ನರೇಗಲ್ ಪಟ್ಟಣದಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ನರೇಗಲ್ ನಿವಾಸಿ ಮಲ್ಲಯ್ಯ ಬಕ್ಕಯ್ಯನವರ (65) ಮೃತಪಟ್ಟಿದ್ದಾರೆ.
ಬೆಳಿಗ್ಗೆ ಚಹಾ ಕುಡಿಯಲೆಂದು ಮನೆಯಿಂದ ಹೊರ ಹೋಗಿದ್ದ ಮಲ್ಲಯ್ಯ ಅವರಿಗೆ ಪರಿಚಿತ ವಾಹನ ಡಿಕ್ಕಿ ಹೊಡೆದಿದೆ.
ಪರಿಣಾಮವಾಗಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ನರೇಗಲ್ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q