ಅಕ್ರಾ: ಪ್ರಧಾನಿ ನರೇಂದ್ರ ಮೋದಿ ಅವರಿಗೆ “ವಿಶಿಷ್ಟ ರಾಜನೀತಿ ಮತ್ತು ಪ್ರಭಾವಶಾಲಿ ಜಾಗತಿಕ ನಾಯಕತ್ವ” ಕ್ಕಾಗಿ ದೇಶದ ರಾಷ್ಟ್ರೀಯ ಗೌರವವಾದ ‘ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ ಪ್ರಶಸ್ತಿಯನ್ನು ಬುಧವಾರ ಘಾನಾದ ಅಧ್ಯಕ್ಷ ಜಾನ್ ಡ್ರಾಮಾನಿ ಮಹಾಮ ಅವರಿಂದ ಪ್ರದಾನ ಮಾಡಿದರು.
‘ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ ಪ್ರಶಸ್ತಿಗೆ ಭಾಜನರಾಗಿರುವುದು ಗೌರವ ತಂದಿದೆ ಎಂದು ಪ್ರಧಾನಿ ಎಕ್ಸ್ ನಲ್ಲಿ ಹೇಳಿದ್ದಾರೆ. ತಮ್ಮ ಸ್ವೀಕಾರ ಭಾಷಣದಲ್ಲಿ, ಈ ಪ್ರಶಸ್ತಿ ತಮಗೆ ಅತ್ಯಂತ ಹೆಮ್ಮೆ ಮತ್ತು ಗೌರವದ ವಿಷಯವಾಗಿದೆ ಎಂದು ಮೋದಿ ಹೇಳಿದರು.
140 ಕೋಟಿ ಭಾರತೀಯರ ಪರವಾಗಿ ನಾನು ಈ ಪ್ರಶಸ್ತಿಯನ್ನು ವಿನಮ್ರವಾಗಿ ಸ್ವೀಕರಿಸುತ್ತೇನೆ ಎಂದು ಹೇಳಿದ ಅವರು, ಎರಡು ದೇಶಗಳ ಯುವಕರ ಆಕಾಂಕ್ಷೆಗಳು ಮತ್ತು ಉಜ್ವಲ ಭವಿಷ್ಯ, ಘಾನಾ ಮತ್ತು ಭಾರತದ ನಡುವಿನ ಐತಿಹಾಸಿಕ ಸಂಬಂಧಗಳು ಮತ್ತು ಅವರ ಶ್ರೀಮಂತ ಸಾಂಸ್ಕೃತಿಕ ಸಂಪ್ರದಾಯಗಳು ಮತ್ತು ವೈವಿಧ್ಯತೆಗೆ ಇದನ್ನು ಅರ್ಪಿಸುವುದಾಗಿ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC