ನವದೆಹಲಿ: ನೈಜೀರಿಯಾದ ರಾಜಧಾನಿ ಅಬುಜಾಗೆ ಆಗಮಿಸಿದ ಪ್ರಧಾನಿ ಮೋದಿಗೆ ಭಾರತೀಯ ವಲಸಿಗರು ಆತ್ಮೀಯವಾಗಿ ಸ್ವಾಗತಿಸಿ, ಮೋದಿ, ಮೋದಿ ಎಂದು ಘೋಷಣೆ ಕೂಗಿದರು.
ಇದೇ ವೇಳೆ ಬಾಲಕಿಯರು ಸಾಂಸ್ಕೃತಿಕ ನೃತ್ಯಗಳನ್ನು ಪ್ರದರ್ಶಿಸಿದರು. ಪ್ರಧಾನಿ ಮೋದಿ ಅವರು ಭಾರತೀಯ ಸಮುದಾಯದ ಜನರ ಆಶಯಗಳನ್ನು ಒಪ್ಪಿಕೊಂಡರು. ಸಾಂಪ್ರದಾಯಿಕ ಉಡುಪನ್ನು ಧರಿಸಿದ ಭಾರತೀಯ ಸಮುದಾಯದ ಜನರು ತಮ್ಮ ಕೈಯಲ್ಲಿ ತ್ರಿವರ್ಣ ಧ್ವಜವನ್ನು ಹಿಡಿದಿದ್ದರು. ಈ ಸಂದರ್ಭದಲ್ಲಿ ಕೆಲವರು ಪ್ರಧಾನಿ ಮೋದಿಯವರ ಆಟೋಗ್ರಾಫ್ ಕೂಡ ತೆಗೆದುಕೊಂಡರು.
ವಲಸೆ ಸಮುದಾಯದ ಅನೇಕ ಸದಸ್ಯರು ಭಾರತೀಯ ಧ್ವಜಗಳನ್ನು ಹಿಡಿದು ಉತ್ಸಾಹದಿಂದ ‘ಭಾರತ್ ಮಾತಾ ಕಿ ಜೈ’ ಎಂದು ಕೂಗುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.
ಭಾರತೀಯ ವಲಸಿಗರ ಸಂಘದ ಸದಸ್ಯ ಗಿರೀಶ್ ಜಯಕರ್ ಮಾತನಾಡಿ, ನಮ್ಮ ಪ್ರಧಾನಿಯನ್ನು ಭೇಟಿಯಾಗುವುದು ತುಂಬಾ ರೋಮಾಂಚನಕಾರಿಯಾಗಿದೆ. ನೈಜೀರಿಯಾಕ್ಕೆ ಇದು ಅವರ ಮೊದಲ ಭೇಟಿಯಾಗಿದೆ ಎಂದು ಕೊಂಡಾಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q