ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಮತ್ತು ಹುಲಿ ಮೀಸಲು ಪ್ರದೇಶದಲ್ಲಿ ಆನೆ ಮತ್ತು ಜೀಪ್ ಸಫಾರಿಯನ್ನು ಕೈಗೊಂಡಿದ್ದಾರೆ.
ಪ್ರಧಾನಿ ಮೋದಿ ಅವರು ಯುನೆಸ್ಕೋ ವಿಶ್ವ ಪರಂಪರೆಯ ತಾಣಕ್ಕೆ ತಮ್ಮ ಮೊದಲ ಭೇಟಿಯಲ್ಲಿ , ಮೊದಲು ಉದ್ಯಾನವನದ ಮಧ್ಯ ಕೊಹೋರಾ ಶ್ರೇಣಿಯ ಮಿಹಿಮುಖ್ ಪ್ರದೇಶದಲ್ಲಿ ಆನೆ ಸಫಾರಿಯನ್ನು ಕೈಗೊಂಡರು ಬಳಿಕ ಜೀಪ್ ನಲ್ಲಿ ಸಫಾರಿಯನ್ನು ಕೈಗೊಂಡಿದ್ದಾರೆ.
ಅವರು ಇಂದು ಜೋರ್ಹತ್ನಲ್ಲಿ ಪ್ರಸಿದ್ಧ ಅಹೋಮ್ ಜನರಲ್ ಲಚಿತ್ ಬರ್ಫುಕನ್ ಅವರ 125 ಅಡಿ ಎತ್ತರದ ‘ಶೌರ್ಯದ ಪ್ರತಿಮೆ’ ಯನ್ನು ಉದ್ಘಾಟಿಸಲಿದ್ದು, ನಂತರ ಪ್ರಧಾನಮಂತ್ರಿಯವರು ಜೋರ್ಹತ್ ಜಿಲ್ಲೆಯಲ್ಲಿರುವ ಮೆಲೆಂಗ್ ಮೆಟೆಲಿ ಪೋಥಾರ್ಗೆ ತೆರಳಲಿದ್ದು, ಅಲ್ಲಿ ಅವರು ಸುಮಾರು 18,000 ಕೋಟಿ ರೂಪಾಯಿ ಮೌಲ್ಯದ ಕೇಂದ್ರ ಮತ್ತು ರಾಜ್ಯ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


