nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ

    July 18, 2026

    ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್

    July 18, 2026
    Facebook Twitter Instagram
    ಟ್ರೆಂಡಿಂಗ್
    • ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು
    • ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ
    • ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್
    • ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ
    • ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ, ಆ. 10 ಕೊನೆಯ ದಿನ
    • ಬಿಡದಿ ಟೌನ್ ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ!
    • ತಿಪಟೂರು: ಲೋಕೇಶ್ವರ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್ ವಿತರಣೆ
    • ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರೊ. ರಾಜೀವ್ ಗೌಡ ಅವರು ಉತ್ತಮ ತಿಳಿವಳಿಕೆ, ಕಾಳಜಿ, ಜನಪರ ಸಿದ್ಧಾಂತ ಹೊಂದಿರುವ ಅರ್ಹ ಅಭ್ಯರ್ಥಿ: ಇವರು ಗೆದ್ದೇ ಗೆಲ್ತಾರೆ: ಸಿ.ಎಂ. ಸಿದ್ದರಾಮಯ್ಯ
    ರಾಜ್ಯ ಸುದ್ದಿ April 7, 2024

    ಪ್ರೊ. ರಾಜೀವ್ ಗೌಡ ಅವರು ಉತ್ತಮ ತಿಳಿವಳಿಕೆ, ಕಾಳಜಿ, ಜನಪರ ಸಿದ್ಧಾಂತ ಹೊಂದಿರುವ ಅರ್ಹ ಅಭ್ಯರ್ಥಿ: ಇವರು ಗೆದ್ದೇ ಗೆಲ್ತಾರೆ: ಸಿ.ಎಂ. ಸಿದ್ದರಾಮಯ್ಯ

    By adminApril 7, 2024No Comments2 Mins Read
    bengaluru

    ಬೆಂಗಳೂರು: ಪ್ರೊ. ರಾಜೀವ್ ಗೌಡ ಅವರು ಉತ್ತಮ ತಿಳಿವಳಿಕೆ, ಕಾಳಜಿ, ಜನಪರ ಸಿದ್ಧಾಂತ ಹೊಂದಿರುವ ಅರ್ಹ ಅಭ್ಯರ್ಥಿ. ಇವರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಗೆದ್ದೇ ಗೆಲ್ಲುವ ಅವಕಾಶಗಳಿವೆ ಎಂದು ಸಿ.ಎಂ. ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

    ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ‌ ಮಹಿಳಾ ಸಮಾವೇಶ ಮತ್ತು ಬೂತ್ ಮುಖಂಡರುಗಳ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಸಿ.ಎಂ. ಸಿದ್ದರಾಮಯ್ಯ ಅವರು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರಿಂದಲೇ ಗೋ-ಬ್ಯಾಕ್ ಅನ್ನಿಸಿಕೊಂಡ ಶೋಭಾ ಕರಂದ್ಲಾಜೆ ಅವರಿಗೆ ಇಲ್ಲಿ ಟಿಕೆಟ್ ಕೊಟ್ಟಿದ್ದಾರೆ. ಉತ್ತರ ಲೋಕಸಭಾ ಕ್ಷೇತ್ರದ ಪ್ರಜ್ಞಾವಂತ ಮತದಾರರು ಶೋಭಾ ಅವರಿಗೆ ಇಲ್ಲಿಂದಲೂ ನೀವು ವಾಪಾಸ್ ಕಳಿಸಿ ಎಂದು ಕರೆ ನೀಡಿದರು.

    ಶೋಭಾ ಕರಂದ್ಲಾಜೆ ಅವರು ಐದು ವರ್ಷಗಳ ಕಾಲ ರಾಜ್ಯಕ್ಕೆ ಆದ ಅನ್ಯಾಯಗಳ ಬಗ್ಗೆ ಒಂದೇ ಒಂದು ದಿನವೂ ದ್ವನಿ ಎತ್ತಲಿಲ್ಲ. ಇಂಥವರಿಂದ ನಿಮ್ಮ ಮತಕ್ಕೆ ಬೆಲೆ ಬರುತ್ತದಾ? ನೀತಿ ಆಯೋಗದ ಉಪಾಧ್ಯಕ್ಷರಾಗಿ, ಉನ್ನತ ಶೈಕ್ಷಣಿಕ ಅರ್ಹತೆ ಮತ್ತು ತಿಳಿವಳಿಕೆ ಹೊಂದಿ ರಾಜ್ಯಕ್ಕೆ ಆದ ಅನ್ಯಾಯಗಳ ಬಗ್ಗೆ ನಿರಂತರವಾಗಿ ಧ್ವನಿ ಎತ್ತುವ ರಾಜೀವ್ ಗೌಡರಿಂದ ನಿಮ್ಮ ಮತಕ್ಕೆ ಉತ್ತಮ ಘನತೆ ಬರುತ್ತದೆ. ಆದ್ದರಿಂದ ಪ್ರಜ್ಞಾವಂತರಾಗಿ ಇವರನ್ನು ಗೆಲ್ಲಿಸಿ ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು.

    ಮೋದಿ ಅವರು ಕಳೆದ ಹತ್ತು ವರ್ಷಗಳಲ್ಲಿ ಹೇಳಿದ ಯಾವುದನ್ನೂ ಜಾರಿ ಮಾಡಲೇ ಇಲ್ಲ. ಕಪ್ಪು ಹಣ ತರಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸಲಿಲ್ಲ, ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ, ಅಡುಗೆ ಎಣ್ಣೆ, ಬೇಳೆ ಕಾಳು ಯಾವುದರ ಬೆಲೆಯನ್ನೂ ಇಳಿಸಲಿಲ್ಲ. ಬರೀ ಬಾಯಲ್ಲಿ ಅಚ್ಛೇ ದಿನ್ ಆಯೆಗಾ ಎಂದು ಭಾಷಣ ಭಾರಿಸಿದ್ದು ಬಿಟ್ಟರೆ ಭಾರತೀಯರ ಬದುಕಿಗೆ ಅಚ್ಛೆ ದಿನ್ ಬರಲೇ ಇಲ್ಲ ಎಂದರು.

    ಕೇಂದ್ರ ಸರ್ಕಾರದ ಬೆಲೆ ಏರಿಕೆಗಳಿಂದ ಹೈರಾಣಾಗಿದ್ದ ನಮ್ಮ ನಾಡಿನ ಜನತೆಯ ಕಷ್ಟಕ್ಕೆ ಸ್ಪಂದಿಸುವ ಉದ್ದೇಶದಿಂದಲೇ ಐದು ಗ್ಯಾರಂಟಿಗಳ ಮೂಲಕ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು 5-6 ಸಾವಿರ ಉಳಿತಾಯ ಆಗುವ ಕಾರ್ಯಕ್ರಮ ಜಾರಿ ಮಾಡಿದ್ದೇವೆ. ಕಾಂಗ್ರೆಸ್ ಸರ್ಕಾರ ಭದ್ರ ಆಗಿರುವವರೆಗೂ ಈ ಅನುಕೂಲ ಪ್ರತಿ ತಿಂಗಳೂ ಜನರ ಮನೆ ಬಾಗಿಲಿಗೆ ಬರುತ್ತಲೇ ಇರುತ್ತದೆ ಎಂದರು.

    ಮೋದಿಯವರು ಮತ್ತೆ ಪ್ರಧಾನಿಯಾದರೆ ಭಾರತ ತೊರೆಯುವುದಾಗಿ ಹೇಳಿದ್ದ ದೇವೇಗೌಡರು ಈಗ ಮೋದಿಯವರ ಜತೆಗೇ ಸೇರಿದ್ದಾರೆ.  ಇದ್ದದ್ದು ಇದ್ದಂಗೆ ಹೇಳಿದರೆ ದೇವೇಗೌಡರಿಗೆ ಸಿಟ್ಟು ಎಂದು ವ್ಯಂಗ್ಯವಾಡಿದರು.

    ನಾಡಿನ ಜನತೆಯ ತೆರಿಗೆ ಹಣದ ಪಾಲಿನಲ್ಲಿ ರಾಜ್ಯಕ್ಕೆ ವಿಪರೀತ ಅನ್ಯಾಯ ಮಾಡಿದರು. ರಾಜ್ಯದ ಜನತೆ ಪ್ರವಾಹದಿಂದ, ಬರಗಾಲದಲ್ಲಿ ನರಳುವಾಗ ಮೋದಿ, ಅಮಿತ್ ಶಾ ನೆಪಕ್ಕೂ ರಾಜ್ಯಕ್ಕೆ ಕಾಲಿಡಲಿಲ್ಲ. ರಾಜ್ಯದ ಪಾಲಿನ ಬರ ಪರಿಹಾರದ ಹಣವನ್ನು ಇವತ್ತಿನವರೆಗೂ ಒಂದೇ ಒಂದು ರೂಪಾಯಿ ನೀಡಲಿಲ್ಲ. ಹೀಗೆ ನಿರಂತರವಾಗಿ ರಾಜ್ಯದ ಜನತೆಗೆ ಮಹಾದ್ರೋಹ ಎಸಗಿದ ಬಿಜೆಪಿ ಯನ್ನು ಸೋಲಿಸಿ 7 ಕೋಟಿ ಕನ್ನಡಿಗರು ಸ್ವಾಭಿಮಾನ ಮೆರೆಯಬೇಕು ಎಂದು ಕರೆ ನೀಡಿದರು.

    ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರೊ.ರಾಜೀವ್ ಗೌಡ ಮತ್ತು 400 ಕ್ಕೂ ಅಧಿಕ ಮಂದಿ ಬೂತ್ ಮಟ್ಟದ ಮಹಿಳಾ ಮುಖಂಡರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     


    Provided by
    Provided by
    admin
    • Website

    Related Posts

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ

    July 18, 2026

    ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ

    July 18, 2026

    Comments are closed.

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಕೊಡಚಾದ್ರಿ ಸಮೀಪ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ…

    ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ

    July 18, 2026

    ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್

    July 18, 2026

    ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ

    July 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.