ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಿಂದ ಸತತ ಮೂರನೇ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, 2014 ಮತ್ತು 2019ರಲ್ಲಿ ಇಲ್ಲಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಇದೀಗ ಸತತ ಮೂರನೇ ಬಾರಿಗೆ ಪ್ರಧಾನಿ ಮೋದಿಯವರು ಇದೇ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವುದರಿಂದ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಹೀಗಾಗಿ ಮೋದಿಯವರ ನಾಮನಿರ್ದೇಶನಕ್ಕೆ ಬಿಜೆಪಿ ಭರ್ಜರಿ ತಯಾರಿ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿಯವರು ನಾಮಪತ್ರ ಸಲ್ಲಿಸುವ ವೇಳೆ ಸುಮಾರು ಹನ್ನೆರಡು ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದ್ದು, ಇದಲ್ಲದೇ ಬಿಜೆಪಿ ಮತ್ತು ಎನ್ ಡಿಎಯ ಹಲವು ನಾಯಕರು ನಾಮಪತ್ರ ಸಲ್ಲಿಕೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಪ್ರಧಾನಿ ಮೋದಿಯವರ ನಾಮನಿರ್ದೇಶನಕ್ಕೆ ಯಾವ ವಿವಿಐಪಿ ಸಾಕ್ಷಿಯಾಗುತ್ತಾರೆ ಅನ್ನೋದರ ವಿವರ ಇಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಮಪತ್ರ ಸಲ್ಲಿಕೆ ವೇಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಹಾರ ಸಿಎಂ ನಿತೀಶ್ ಕುಮಾರ್, ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ರಾಜಸ್ಥಾನ ಸಿಎಂ ಭಜನ್ಲಾಲ್ ಶರ್ಮಾ, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ಛತ್ತೀಸ್ ಗಢ ಸಿಎಂ ವಿಷ್ಣು ದೇವ್ ಸಾಯಿ, ಹರಿಯಾಣ ಸಿಎಂ ನಯಾಬ್ ಸಿಂಗ್ ಸೈನಿ, ಗೋವಾ ಸಿಎಂ ಪ್ರಮೋದ್ ಸಾವಂತ್, ತ್ರಿಪುರಾ ಸಿಎಂ ಮಾಣಿಕ್ ಸಹಾ, ಸಿಕ್ಕಿಂ ಸಿಎಂ ಪ್ರೇಮ್ ಸಿಂಗ್ ತಮಾಂಗ್, ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296