ಮುಂಬರುವ ಬಜೆಟ್ ಅಧಿವೇಶನದಲ್ಲಿ ಬಡ ಸಮುದಾಯಗಳ ಕಲ್ಯಾಣಕ್ಕಾಗಿ ಹಲವಾರು ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದ್ದು, ಅದರಲ್ಲಿ ಜಾರಿಗೊಳಿಸುವ ಯೋಜನೆಯೊಂದು ಇದು ಪ್ರತಿ ಕುಟುಂಬಕ್ಕೆ 10 ಲಕ್ಷ ರೂ.ಗಳವರೆಗೆ ಪ್ರಯೋಜನವನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಈ ಬೆನ್ನಲ್ಲೇ ರೈತಗೂ ಸಿಹಿ ಸುದ್ದಿ ಸಿಗಲಿದೆ ಎನ್ನಲಾಗಿದೆ.
ಕೇಂದ್ರ ಬಜೆಟ್ ನಲ್ಲಿ ಪಿಎಂ ಕಿಸಾನ್ ಯೋಜನಾ ನಿಧಿಯನ್ನು 6,000 ರೂ.ಗಳಿಂದ 8,000 ರೂ.ಗೆ ಹೆಚ್ಚಿಸಲಾಗುವುದು ಎಂದು ಈಗಾಗಲೇ ವರದಿಗಳು ಬಂದಿವೆ. ಇದು ನಿಜವಾದರೆ ರೈತರಿಗೆ ಕೇಂದ್ರ ಕೊಡುವ ಬಂಪರ್ ಗುಡ್ ನ್ಯೂಸ್ ಇದಾಗಿದೆ.
ಅಂದಹಾಗೆ ಕಳೆದು ತಿಂಗಳು 3ನೇ ಸಲ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಕಚೇರಿಗೆ ಆಗಮಿಸುತ್ತಿದ್ದಂತೆ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ರೈತರ ಖಾತೆಗೆ ಬರೋಬ್ಬರಿ 20,000 ಕೋಟಿ ರೂಪಾಯಿ ಜಮೆ ಮಾಡಿಸಿದ್ದರು. ಈ ಮೂಲಕ ಕಿಸಾನ ಸಮ್ಮಾನ್ ನಿಧಿಯ 17ನೇ ಕಂತನ್ನು ಮೋದಿ ಬಿಡುಗಡೆ ಮಾಡಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


