ತುಮಕೂರು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ತುಮಕೂರಿನಲ್ಲಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ.ಸೋಮಣ್ಣ ನೇತೃತ್ವದಲ್ಲಿ ವಿವಿಧ ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಮುಖ್ಯವಾಗಿ ಸ್ವಚ್ಚ್ ಭಾರತ್ ಕಾರ್ಯಕ್ರಮದ ಅನುಷ್ಟಾನ ಮತ್ತು ಜನರಿಗೆ ಮನವರಿಕೆ ಮಾಡಿಕೊಡುವ ಯತ್ನ ಮಾಡಲಾಯಿತು.
ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಇರುವ ಸಚಿವ ವಿ.ಸೋಮಣ್ಣ ಕಚೇರಿ ಮುಂಭಾಗ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ, ಉಚಿತ ಕನ್ನಡಕಗಳ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಜ್ಯೋತಿ ಗಣೇಶ್, ಸುರೇಶ್ ಗೌಡ ಮತ್ತಿತರರು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q