ನವದೆಹಲಿ: ದೇಶದ ನಾಗರಿಕರಿಗೆ ದೀಪಾವಳಿ ಉಡುಗೊರೆಯಾಗಿ ಜಿಎಸ್ ಟಿಯಲ್ಲಿ ಸುಧಾರಣೆ ತರುವುದಾಗಿ ಪ್ರಧಾನಿ ನರೇಂದ್ರ ಮೋದಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಘೋಷಿಸಿದರು.
ಈ ದೀಪಾವಳಿಗೆ, ನಾನು ನಿಮಗಾಗಿ ಡಬಲ್ ಧಮಾಕ ನೀಡಲಿದ್ದೇನೆ. ಈ ದೀಪಾವಳಿಯಲ್ಲಿ ನಾಗರಿಕರು ದೊಡ್ಡ ಉಡುಗೊರೆಯನ್ನು ಪಡೆಯಲಿದ್ದಾರೆ. ನಾವು ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಗಳನ್ನು ತರುತ್ತಿದ್ದೇವೆ. ಇದು ದೇಶಾದ್ಯಂತ ತೆರಿಗೆ ಹೊರೆಯನ್ನು ಕಡಿಮೆ ಮಾಡುತ್ತದೆ. ಇದು ದೀಪಾವಳಿ ಉಡುಗೊರೆಯಾಗಲಿದೆ ಎಂದು ಹೇಳಿದ್ದಾರೆ.
ಎಂಟು ವರ್ಷಗಳ ಹಿಂದೆ ಸರ್ಕಾರವು ಪ್ರಮುಖ ಸುಧಾರಣೆಗಳನ್ನು ಕೈಗೊಂಡಿದೆ. ಸರ್ಕಾರವು ದೇಶಾದ್ಯಂತ ತೆರಿಗೆ ಹೊರೆಯನ್ನು ಕಡಿಮೆ ಮಾಡಿ, ತೆರಿಗೆ ಪ್ರಕ್ರಿಯೆಯನ್ನು ಸರಳಗೊಳಿಸಿದೆ ಎಂದು ಭರವಸೆ ನೀಡಿದ್ದಾರೆ.
ವಿಕಸಿತ ಭಾರತ ರೋಜ್ ಗಾರ್ ಯೋಜನೆಯಡಿಯಲ್ಲಿ ಮೊದಲ ಬಾರಿಗೆ ಖಾಸಗಿ ವಲಯದ ಉದ್ಯೋಗ ಮಾರುಕಟ್ಟೆಗೆ ಪ್ರವೇಶಿಸುವ ಯುವಕರಿಗೆ 15,000 ರೂ. ನೆರವನ್ನು ಮೋದಿ ಘೋಷಿಸಿದ್ದಾರೆ. ಈ ಯೋಜನೆಯಿಂದ 3.5 ಕೋಟಿಗೂ ಹೆಚ್ಚು ಯುವಜನರು ಪ್ರಯೋಜನ ಪಡೆಯುವ ನಿರೀಕ್ಷೆಯಿದೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC