ಲೋಕಸಭಾ ಚುನಾವಣೆಯ ಫಲಿತಾಂಶ ರಣರೋಚಕವಾಗಿದೆ. ದೇಶಾದ್ಯಂತ ಮತಎಣಿಕೆ ಬಿರುಸಿನಿಂದ ನಡೆಯುತ್ತಾ ಇದ್ದು, ಯಾರ್ ಗೆಲ್ತಾರೆ? ಯಾರ್ ಸೋಲ್ತಾರೆ ಅನ್ನೋ ಕುತೂಹಲ ಮುಗಿಲು ಮುಟ್ಟಿದೆ.
543 ಲೋಕಸಭಾ ಕ್ಷೇತ್ರದಲ್ಲಿ ಇಡೀ ದೇಶದ ಕಣ್ಣು ಬಿದ್ದಿರೋದು ವಾರಣಾಸಿ ಲೋಕಸಭಾ ಕ್ಷೇತ್ರದ ಮೇಲೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ಪರ್ಧಿಸಿರುವ ವಾರಣಾಸಿ ಲೋಕಸಭಾ ಕ್ಷೇತ್ರದ ಫಲಿತಾಂಶ ಭಾರೀ ಕುತೂಹಲ ಕೆರಳಿಸಿದೆ.
ಉತ್ತರಪ್ರದೇಶದಲ್ಲಿ ಸದ್ಯ ಎನ್ ಡಿಎ, ಇಂಡಿಯಾ ಮೈತ್ರಿಕೂಟ ಅಭ್ಯರ್ಥಿಗಳ ಮಧ್ಯೆ ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿದೆ. ಸದ್ಯದ ಮಾಹಿತಿ ಪ್ರಕಾರ ನರೇಂದ್ರ ಮೋದಿ ಅವರ ವಿರುದ್ಧ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ – 18629
ಬಿಜೆಪಿ ಅಭ್ಯರ್ಥಿ ನರೇಂದ್ರ ಮೋದಿ – 14540
ವಾರಣಾಸಿ ಲೋಕಸಭಾ ಕ್ಷೇತ್ರದ ಮತ ಎಣಿಕೆಯಲ್ಲಿ ಮೋದಿ ಅವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ 4089 ಮತಗಳ ಅಂತರದಲ್ಲಿ ಮುನ್ನಡೆಯಲ್ಲಿದ್ದಾರೆ.
2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ 4 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಬಾರಿ 5 ಲಕ್ಷ ಮತಗಳ ಅಂತರದಲ್ಲಿ ಮೋದಿ ಅವರನ್ನು ಗೆಲ್ಲಿಸಲು ಬಿಜೆಪಿ ನಾಯಕರು ಪಣತೊಟ್ಟಿದ್ದರು. 2014, 2019ರಲ್ಲಿ ಗೆದ್ದಿದ್ದ ಪ್ರಧಾನಿ ಮೋದಿ ಅವರು ಸತತ 3ನೇ ಬಾರಿ ಗೆಲ್ಲುವ ಉತ್ಸಾಹದಲ್ಲಿದ್ದರು. ಆದರೆ ವಾರಣಾಸಿಯಲ್ಲಿ ಸದ್ಯ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296