ಬೆಂಗಳೂರು: ಪ್ರಿನ್ಸಿಪಾಲ್ ಬೈದಿದ್ದಕ್ಕೆ ಕಾನೂನು ವಿದ್ಯಾರ್ಥಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಕೆ. ಜಿ ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಅಲ್ ಅಮೀನ್ ಕಾಲೇಜು ವಿದ್ಯಾರ್ಥಿ ರಿಜ್ವಾನ್ (25) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಎಲ್ ಎಲ್ ಬಿ ಫೈನಲ್ ಇಯರ್ ಓದುತ್ತಿದ್ದ ರಿಜ್ವಾನ್, ನಿನ್ನೆ ಪ್ರಿನ್ಸಿಪಾಲ್ ಬೈದಿದ್ದಾರೆಂಬ ಕಾರಣಕ್ಕೆ ಮನನೊಂದಿದ್ದ ಎಂದು ತಿಳಿದುಬಂದಿದೆ.
ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದ ಎನ್ನಲಾಗಿದೆ. ಕೆಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


