nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

    June 5, 2026

    ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್

    June 5, 2026

    ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ

    June 5, 2026
    Facebook Twitter Instagram
    ಟ್ರೆಂಡಿಂಗ್
    • ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ
    • ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್
    • ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ
    • ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
    • ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ
    • ಆಮ್ಲಜನಕವನ್ನು ಹಣಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು: ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್ಚರಿಕೆ
    • ಸಹನಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ವಿವಿಧ ಸ್ಪರ್ಧೆಗಳು, ಬಹುಮಾನ ವಿತರಣೆ
    • ಕುಣಿಹಳ್ಳಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ಗಿಡ ನೆಡುವ ಮೂಲಕ ಜಾಗೃತಿ ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುದ್ರಣ ಮಾಧ್ಯಮಗಳು ಇಂದಿಗೂ ಜನರ ವಿಶ್ವಾಸರ್ಹತೆ ಉಳಿಸಿಕೊಂಡಿವೆ: ಅಂಶಿ ಪ್ರಸನ್ನ ಕುಮಾರ್ ಅಭಿಮತ
    ಜಿಲ್ಲಾ ಸುದ್ದಿ January 8, 2026

    ಮುದ್ರಣ ಮಾಧ್ಯಮಗಳು ಇಂದಿಗೂ ಜನರ ವಿಶ್ವಾಸರ್ಹತೆ ಉಳಿಸಿಕೊಂಡಿವೆ: ಅಂಶಿ ಪ್ರಸನ್ನ ಕುಮಾರ್ ಅಭಿಮತ

    By adminJanuary 8, 2026No Comments2 Mins Read
    press

    ವರದಿ: ಹಾದನೂರು ಚಂದ್ರ

    ಎಚ್.ಡಿ.ಕೋಟೆ: ಸಾಮಾಜಿಕ ಜಾಲತಾಣ, ಎಲೆಕ್ಟ್ರಿಕ್ ಮಾಧ್ಯಮಗಳ ನಡುವೆಯೂ ಇಂದಿಗೂ ಮುದ್ರಣ ಮಾಧ್ಯಮಗಳು ಜನರ ನಂಬಿಕೆ ಮತ್ತು ವಿಶ್ವಾಸರ್ಹತೆಯನ್ನು ಉಳಿಸಿಕೊಂಡಿವೆ ಎಂದು ಕನ್ನಡಪ್ರಭ ದಿನ ಪತ್ರಿಕೆ ಸ್ಥಾನಿಕ ಸಂಪಾದಕ ಅಂಶಿ ಪ್ರಸನ್ನ ಕುಮಾರ್ ತಿಳಿಸಿದರು.


    Provided by
    Provided by

    ಎಚ್.ಡಿ.ಕೋಟೆ ತಾಲೂಕಿನ ಅಂತರಸಂತೆ ವನ್ಯಜೀವಿ ವಲಯದ ಕಾಕನಕೋಟೆ ಸಫಾರಿ ಕೇಂದ್ರದಲ್ಲಿ ಆಯೋಜಿಸಿದ್ದ ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕು ಪತ್ರಕರ್ತರ ಸಂಘದ ಹೊರ ತಂದಿರುವ ನೂತನ ವರ್ಷದ ದಿನದರ್ಶಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಉಪಸ್ಥಿತಿವಹಿಸಿ ಮಾತನಾಡಿದ ಅವರು, ಮಾಧ್ಯಮಗಳು ಜನರು ಮತ್ತು ಸರ್ಕಾರದ ನಡುವೆ ಸೇತುವೆಯಂತೆ ಕೆಲಸ ಮಾಡಬೇಕು. ಆ ಮೂಲಕ ಜನರ ನಂಬಿಕೆ ಸಂಪಾದಿಸಬೇಕು. ಸಮಸಮಾಜದ ನಿರ್ಮಾಣದ ಕನಸ್ಸಿಗೆ ಮಾಧ್ಯಮಗಳು ಶ್ರಮಿಸಬೇಕು ಎಂದರು.

    ಈ ತಾಲೂಕಿನಲ್ಲಿ ಪತ್ರಕರ್ತರು ಮತ್ತು ಶಾಸಕ ಸಂಬಂಧ ಉತ್ತಮವಾಗಿದೆ. ಅನಿಲ್ ಚಿಕ್ಕಮಾದು ಅವರು, ಪತ್ರಕರ್ತರಿಗೆ ಬೆಂಬಲವಾಗಿ ನಿಂತಿದ್ದಾರೆ. ಅವರ ತಂದೆ ಕೂಡ ಪತ್ರಕರ್ತರ ಪರ, ಸಮಾಜ ಪರವಾಗಿದ್ದರು. ಪತ್ರಕರ್ತರಲ್ಲಿ ನೈತಿಕತೆ ಇರಬೇಕು. ಯಾವುದೇ ಆಸೆಗಳಿಗೆ ಬಲಿಯಾಗದೆ, ಸಮಾಜಮುಖಿಯಾಗಿ ಕೆಲಸ ಮಾಡಿದಾಗ ಮಾತ್ರ ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯ ಎಂದರು.

    ಪತ್ರಕರ್ತರು ದಾಖಲೆಗಳನ್ನು ಇಟ್ಟುಕೊಂಡು ಸುದ್ದಿ ಮಾಡಬೇಕು. ದಾಖಲೆಗಳಿಲ್ಲದೇ ಯಾವುದೇ ವ್ಯಕ್ತಿಯ, ಸಂಸ್ಥೆಯ ತೇಜೋವಧೆ ಮಾಡಲು ಸಾಧ್ಯವಿಲ್ಲ.  ಆದರೆ, ಕೆಲ ಎಲೆಕ್ಟ್ರಾನಿಕ್ ಮಾಧ್ಯಮಗಳು ದುರುಪಯೋಗಪಡಿಸಿಕೊಂಡು ಯಾವುದೇ ದಾಖಲೆಗಳಿಲ್ಲದೇ ಸುದ್ದಿ ಮಾಡುತ್ತಿವೆ ಎಂದು ಬೇಸರಿಸಿದರು. ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ನಮ್ಮಲ್ಲಿನ ತಾಲೂಕು ಪತ್ರಕರ್ತರ ಸಂಘದಲ್ಲಿ ಬಹಳಷ್ಟು ಒಗ್ಗಟ್ಟಿದೆ. ನಾನು ಇಂದು ಸರ್ಕಾರದಲ್ಲಿ ಉತ್ತಮ ಸ್ಥಾನಮಾನ ಗಳಿಸಿದ್ದೇನೆ. ಕ್ಷೇತ್ರದಲ್ಲಿ ಎರಡು ಬಾರಿ ಶಾಸಕನಾಗಿದ್ದೇನೆ ಎಂದರೆ ಅದಕ್ಕೆ ಪತ್ರಕರ್ತರ ಕೊಡುಗೆ ಅಪಾರ. ಪತ್ರಕರ್ತರು ನನಗೆ ಮಾರ್ಗದರ್ಶಕರಾಗಿದ್ದಾರೆ. ನನ್ನ ಕೆಲಸಗಳ ಬಗ್ಗೆ ನನಗೆ ಎಚ್ಚರಿಸುತ್ತಾರೆ. ನಿತ್ಯ ಪತ್ರಿಕೆಗಳನ್ನು ಓದುವ ಮೂಲಕ ನಾನು ಕ್ಷೇತ್ರದ ಬಗ್ಗೆ ತಿಳಿದುಕೊಂಡು ಆ ಮೂಲಕ ಕಾರ್ಯಪ್ರೌವೃತ್ತನಾಗುತ್ತೇನೆ ಎಂದರು.

    ಕಾರ್ಯಕ್ರಮದಲ್ಲಿ ಅಧ್ಯಕ್ಷತೆವಹಿಸಿದ್ದ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಆರ್. ನಾಗರಾಮ ಮಾತನಾಡಿದರು.

    ಈ ಸಂದರ್ಭ ಉಪಾಧ್ಯಕ್ಷರಾದ ದೊಡ್ಡಸಿದ್ದು ಹಾದನೂರು, ಪ್ರಧಾನ ಕಾರ್ಯದರ್ಶಿ ಬಿ.ನಿಂಗಣ್ಣ ಕೋಟೆ, ಕಾರ್ಯದರ್ಶಿ ಗಳಾದ ಪುಟ್ಟರಾಜು, ದಾಸೇಗೌಡ, ಖಂಜಾಂಚಿ ಜಿ.ರವಿಕುಮಾರ್, ನಿರ್ದೇಶಕರಾದ  ಚಂದ್ರು ಹಾದನೂರು, ರಂಗರಾಜು, ವಾಸೂಕಿ ನಾಗೇಶ್, ಸುರೇಶ್, ಶರವಣ, ಹಂಪಾಪುರ ನಾಗೇಶ್, ಸಂಘದ ಹಿರಿಯ ಸದಸ್ಯರಾದ ಬಸವರಾಜು,ಎಂ,ಎಲ್ ರವಿಕುಮಾರ್, ರಘು, ಜಶೀಲ, ರಾಜ್ಯ ವನ್ಯಜೀವಿ ಮಂಡಳಿ ನಿರ್ದೇಶಕ ವಡ್ಡರಗುಡಿ ಚಿಕ್ಕಣ್ಣ, ನೂರಲಕುಪ್ಪೆ  ಗ್ರಾ.ಪಂ.ಅಧ್ಯಕ್ಷೆ ಸುನೀತಾ ಮಹಾದೇವಸ್ವಾಮಿ, ಸಿಸಿಎಫ್ ರಮೇಶ್ ಕುಮಾರ್, ಅಂತರಸಂತೆ ವನ್ಯಜೀವಿ ವಲಯದ ಆರ್ ಎಫ್ ಒ ಎಸ್.ಸಿದ್ದರಾಜು, ತಾ.ಪಂ. ಮಾಜಿ ಸದಸ್ಯ ಸ್ಟ್ಯಾನಿ ಬಿಟ್ಟೋ, ಕಬಿನಿ ಹೇಮಂತ್ ಸೇರಿದಂತೆ  ಮುಂತಾದವರು ಹಾಜರಿದ್ದರು.

    ಕ್ಷೇತ್ರದಲ್ಲಿ ಜೋಡಿ ರಸ್ತೆ ನಿರ್ಮಾಣದ ಬಗ್ಗೆ ಮುಖ್ಯಮಂತ್ರಿಗಳ ಬಳಿ ಚರ್ಚಿಸಿದ್ದೇನೆ. ಈಗಾಗಲೇ ಸರ್ವೆಗಳು ಆರಂಭವಾಗಿವೆ. ಮುಂದಿನ ದಿನಗಳಲ್ಲಿ ಡಿಪಿಆರ್ ಸಿದ್ಧಪಡಿಸುವ ಬಗ್ಗೆ ಸಂಬಂಧಪಟ್ಟ ಸಚಿವರೊಂದಿಗೆ ಸಭೆ ನಡೆಸಲಿದ್ದೇನೆ. ಇದರ ಜತೆಗೆ ಕ್ಷೇತ್ರದ ಮೂಲ ಸೌಕರ್ಯಗಳ ಅಭಿವೃದ್ಧಿ ಹಾಗೂ ರೈತರಿಗೆ ಜಮೀನು ಮಂಜೂರಾತಿ ಬಗ್ಗೆಯೂ ಚರ್ಚಿಸಲಾಗುವುದು.

    –ಅನಿಲ್ ಚಿಕ್ಕಮಾದು, ಶಾಸಕರು, ಎಚ್.ಡಿ.ಕೋಟೆ ವಿಧಾನ ಸಭಾ ಕ್ಷೇತ್ರ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ

    June 5, 2026

    ಆಮ್ಲಜನಕವನ್ನು ಹಣಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು: ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್ಚರಿಕೆ

    June 5, 2026

    ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯುವ ಕಾಂಗ್ರೆಸ್  ಮುಖಂಡ ಒತ್ತಾಯ

    June 2, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

    June 5, 2026

    ಕೊರಟಗೆರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲ್ಲೂಕಿನ ತಣ್ಣೇನಹಳ್ಳಿ ಸರ್ಕಾರಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ…

    ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್

    June 5, 2026

    ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ

    June 5, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.