ಮೈಸೂರಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ವಿರುದ್ಧ ಪ್ರಿಯಕರನ (Lover) ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
ಕೊಲೆಯಾದ ವ್ಯಕ್ತಿ ಹೂಟಗಳ್ಳಿ ನಿವಾಸಿ ಮಂಜು ಎಂದು ತಿಳಿದು ಬಂದಿದೆ. ಪತ್ನಿ ಲಿಖಿತಾ ತನ್ನ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿದ್ದಾಳೆ ಎಂದು ಮಂಜುನ ಕುಟುಂಬಸ್ಥರು ಆರೋಪಿಸಿದ್ದಾರೆ.
ಘಟನೆಯ ಹಿನ್ನೆಲೆ :
ಕಳೆದ 12 ವರ್ಷದ ಹಿಂದೆ ಮಂಜು ಹಾಗೂ ಲಿಖಿತಾ ಅವರ ಮದುವೆಯನ್ನು ಕುಟುಂಬಸ್ಥರು ಮಾಡಿದ್ದರು. ದಂಪತಿಗಳಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಆದರೆ ಇತ್ತೀಚೆಗೆ ಲಿಖಿತಾ ಪತಿಯನ್ನು ಬಿಟ್ಟು ತನ್ನ ಪ್ರಿಯಕರನೊಂದಿಗೆ ಓಡಿ ಹೋಗಿದ್ದಳು. ಈ ವೇಳೆ ಹಿರಿಯರು ರಾಜಿ ಪಂಚಾಯಿತಿ ನಡೆಸಿ ಲಿಖಿತಾಳನ್ನು ಮತ್ತೆ ಗಂಡನ ಮನೆಗೆ ವಾಪಸ್ ಕಳುಹಿಸಿದ್ದರು.
ಈ ನಡುವೆ ಪತಿ, ಪತ್ನಿಗೆ ಅನೈತಿಕ ಸಂಬಂಧ ಮುಂದುವರಿಸದಂತೆ ಹೇಳಿದ್ದನಂತೆ. ಇದರಿಂದ ಕೋಪಗೊಂಡ ಪತ್ನಿ ಲಿಖಿತಾ, ರಾತ್ರೋರಾತ್ರಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿದ್ದಾಳೆ ಎನ್ನಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲು ಮಾಡಿರುವ ಪೊಲೀಸರು ಪತ್ನಿ ಲಿಖಿತಾಳನ್ನು ವಶಕ್ಕೆ ಪಡೆದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


