ವಿಜಯಪುರ: ನಿಮ್ಮ ತಂದೆಯ ಬಂಡವಾಳ ಬಯಲು ಮಾಡುತ್ತೇನೆಂದು ವಿಜಯೇಂದ್ರಗೆ ಪ್ರಿಯಾಂಕ್ ಖರ್ಗೆ ಬೆದರಿಕೆ ಹಾಕಿದ್ದರು, ಹೀಗಾಗಿ ಕಲಬುರಗಿ ಪ್ರತಿಭಟನೆಗೆ ವಿಜಯೇಂದ್ರ ಹೋಗಿಲ್ಲ ಎಂದು ಶನಿವಾರ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಜಯೇಂದ್ರ ಹಿತೈಷಿಗಳೇ ದೊಡ್ಡ ಮಟ್ಟದ ಹೋರಾಟ ಆಯೋಜನೆ ಮಾಡಿದ್ದರು. ಆದರೂ, ವಿಜಯೇಂದ್ರ ಈ ಹೋರಾಟಕ್ಕೆ ಯಾಕೆ ಹೋಗಲಿಲ್ಲ? ಗೈರಾಗಿದ್ದು ಯಾಕೆ? ಸುರಕ್ಷತೆಯ ಭಯವೇ? ಇದಕ್ಕೆ ವಿಜಯೇಂದ್ರನೇ ಉತ್ತರಿಸಬೇಕು.
ವಿಜಯೇಂದ್ರಗೆ ನಿಮ್ಮ ತಂದೆಯ ಎಲ್ಲ ವಿಷಯಗಳನ್ನು ಹೊರ ತೆಗೆಯುತ್ತೇನೆಂದು ಪ್ರಿಯಾಂಕ್ ಖರ್ಗೆಯವರು ಧಮ್ಕಿ ಹಾಕಿದ್ದರು. ಕಲಬುರಗಿಯಲ್ಲಿ ನನ್ನ ವಿರುದ್ಧ ಪ್ರತಿಭಟನೆಗೆ ಬರಬೇಡಿ, ಬಂದರೆ ನಿಮ್ಮ ತಂದೆಯ ಬಂಡವಾಳ ಬಯಲು ಮಾಡುತ್ತೇನೆಂದು ವಿಜಯೇಂದ್ರಗೆ ಪ್ರಿಯಾಂಕ್ ಖರ್ಗೆ ಬೆದರಿಕೆ ಹಾಕಿದ್ದರು. ಈ ಭಯದ ಕಾರಣಕ್ಕೆ ವಿಜಯೇಂದ್ರ ಹೋಗಿಲ್ಲ ಎಂದು ದೂರಿದರು.
ರಾಜ್ಯದಲ್ಲಿ ಅಡ್ಜಸ್ಟ್ ಮೆಂಟ್’ಗೆ ಒಳಗಾಗದ ನಾಲ್ವರನ್ನು ಗುರಿ ಮಾಡಲಾಗಿದೆ ಎಂದ ಅವರು, ನಾನು, ಸಿಟಿ.ರವಿ, ಚಕ್ರವರ್ತಿ ಸೂಲಿಬೆಲೆ, ಪ್ರಮೋದ್ ಮುತಾಲಿಕ್, ಪ್ರತಾಪ್ ಸಿಂಹ್ ನಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx