ಪರಮೇಶ್ವರ್ ತಮ್ಮ ಗೃಹ ಖಾತೆಯನ್ನು ಪ್ರಿಯಾಂಕ ಖರ್ಗೆಗೆ ಲೀಸ್ ಕೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ನಳೀನ್ ಕುಮಾರ್ ಕಟೀಲ್, ಗೃಹ ಸಚಿವರಾದ ಪರಮೇಶ್ವರ್ ಅವರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆಯೋ?ಅಥವಾ ತಮ್ಮ ಖಾತೆಯ ಮೇಲೆ ಬೇಸರವೋ ತಿಳಿಯುತ್ತಿಲ್ಲ. ತಮ್ಮ ಗೃಹಖಾತೆಯ ಕೆಲಸಗಳನ್ನು ಪ್ರಿಯಾಂಕ ಖರ್ಗೆ ಅವರಿಗೆ ಲೀಸ್‌ಗೆ ಕೊಟ್ಟಿದ್ದಾರೋ. ಪೊಲೀಸ್ ಅಧಿಕಾರಗಳಿಗೆ ಮರಿ ಖರ್ಗೆಯವರು ಕ್ಲಾಸ್ ತಗೊತಿದ್ದಾರೆ ಎಂದರೆ ನನ್ನ ಊಹೆ ನಿಜ ಅಲ್ಲವೇ ಸಿದ್ದರಾಮಯ್ಯನವರೇ ಎಂದು ಪ್ರಶ್ನೆ ಮಾಡಿದ್ದಾರೆ.
ಪ್ರಿಯಾಂಕ ಖರ್ಗೆ ಅವರೇ ಪೊಲೀಸ್ ಅಧಿಕಾರಿಗಳನ್ನು ಕಂಟ್ರೋಲ್ ಮಾಡುವ ಕೆಲಸ ಬಿಟ್ಟು, ದನಕಳ್ಳರ ಮೇಲೆ ಕಠಿಣ ಕ್ರಮ ಕೈಗೊಳ್ಳಿ, ಅಕ್ರಮ ಕಸಾಯಿಖಾನೆಗಳ ಮೇಲೆ ಕ್ರಮ ಕೈಗೊಳ್ಳಿ, ಲವ್ ಜಿಹಾದ್ ಮಾಡುವವರ ಮೇಲೆ ಕ್ರಮ ಕೈಗೊಳ್ಳಿ, ಅಶಾಂತಿ ದೂತರ ಮೇಲೆ ಕ್ರಮ ಕೈಗೊಳ್ಳಿ. ಹಿಂದೂಪರ ಕಾರ್ಯಕರ್ತರ ಮೇಲೆ ಟಾರ್ಗೆಟ್ ಮಾಡೋದು ಬೇಡ ಎಂದು ಸರಣಿ ಟ್ವಿಟ್ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


