ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್ ನ ಗುತ್ತಿಗೆದಾರನ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ ಖರ್ಗೆಯವರ ಹೆಸರಿರುವುದಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರವಾಗಲಿ, ಸಾಕ್ಷ್ಯವಾಗಲಿ ಇಲ್ಲ. ಆದ್ದರಿಂದ ರಾಜಿನಾಮೆ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಆದಾಗ್ಯೂ ಯಾವುದೇ ವಿಚಾರಣೆಗೆ ತಾನು ಸಿದ್ಧವಿರುವುದಾಗಿ ಸಚಿವರು ತಿಳಿಸಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂತಹದೇ ಪ್ರಕರಣದಲ್ಲಿ ಹಿಂದೆ ಬಿಜೆಪಿಯ ಕೆ.ಎಸ್.ಈಶ್ವರಪ್ಪಅವರ ಹೆಸರನ್ನು ಡೆತ್ ನೋಟ್ ನಲ್ಲಿ ಬರೆಯಲಾಗಿತ್ತು. ಪ್ರಕರಣದ ಸಂಬಂಧ ದಾಖಲಾಗಿರುವ ದೂರಿನ ತನಿಖೆಯನ್ನು ಸಿಐಡಿ ಗೆ ವಹಿಸಲಾಗಿದ್ದು, ವರದಿ ಬಂದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx