ತುಮಕೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ, ತುಮಕೂರು ಜಿಲ್ಲಾ ದಿನಪತ್ರಿಕೆ ಹಂಚಿಕೆದಾರರ ಸಂಘ ಇವರ ವತಿಯಿಂದ ನ.28 ರಂದು ಬೆಳಗ್ಗೆ 11.30ಕ್ಕೆ ಪತ್ರಿಕಾ ಭವನದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಪತ್ರಿಕಾ ವಿತರಕರ ಕ್ರೀಡಾಕೂಟದಲ್ಲಿ ವಿಜೇತರಾದ ಪತ್ರಿಕಾ ವಿತರಕರ ಕುಟುಂಬದವರಿಗೆ ಬಹುಮಾನ ವಿತರಣೆ ಸಮಾರಂಭ ಏರ್ಪಡಿಸಲಾಗಿದೆ.
ಉದ್ಘಾಟನೆಯನ್ನು ಶಾಸಕ ಜಿ.ಬಿ.ಜ್ಯೋತಿಗಣೇಶ್ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷ ಕೆ. ಶಂಭುಲಿಂಗ ವಹಿಸುವರು. ಮುಖ್ಯ ಅತಿಥಿಗಳಾಗಿ ಶಿವಾನ೦ದ ತಗಡೂರು, ಯೋಗೀಶ್, ಡಾ.ಎಸ್.ನಾಗಣ್ಣ, ಶಶಿಧರ್ ದೋಣಿಹಕ್ಕು, ಸೊಗಡು ವೆಂಕಟೇಶ್, ರಾಜೇಶ್ವರಿ ರುದ್ರಪ್ಪ, ವಿಶೇಷ ಆಹ್ವಾನಿತರಾಗಿ ಪ್ರಶಾಂತ್ ಕುಮಾರ್ ಎನ್., ಸುರೇಶ್ ಪಿ, ಶಿವಶಾತ್, ಜಗದೀಶ್, ಎಂ.ಟಿ.ಗೋಪಾಲ್, ಇದೇ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಅನು ಶಾಂತರಾಜ್, ಜಿಲ್ಲಾ ಹಾಗೂ ತಾಲ್ಲೂಕು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದವರನ್ನು ಗೌರವಿಸಲಾಗುವುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


