ತುಮಕೂರು: ಕರ್ನಾಟಕ ಬಂದ್ ಹಿನ್ನಲೆ ನಗರದಲ್ಲಿ ಪ್ರತಿಭಟನೆ ನಡೆಸಿದ ಕನ್ನಡಪರ ಸಂಘಟನೆ ಸದಸ್ಯರು ಗೃಹ ಸಚಿವ ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದರು.
ತುಮಕೂರಿನ ಕ್ರೀಡಾಂಗಣ ಆವರಣದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದ ವೇದಿಕೆ ಬಳಿ ಮನವಿ ಸಲ್ಲಿಕೆ ಮಾಡಿದರು.
ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರನ್ನು ಕಂಡು ವೇದಿಕೆಯಿಂದ ಇಳಿದು ಬಂದ ಪರಮೇಶ್ವರ್ ಸಂಘಟನೆ ಮುಖಂಡ ಅರುಣಕುಮಾರ್ ಅವರಿಂದ ಮನವಿ ಸ್ವೀಕರಿಸಿದರು.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಗೆ ಡಿಸಿ ಶುಭಕಲ್ಯಾಣ್, ಎಸ್ಪಿ ಅಶೋಕ್ ವೆಂಕಟ್ ಸಾಥ್ ನೀಡಿದರು.
ಅಹಿತಕರ ಘಟನೆ ನಡೆದಿಲ್ಲ:
ಇಂದಿನ ಕರ್ನಾಟಕ ಬಂದ್ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಂದ್ ವೇಳೆ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ತುಮಕೂರಿನಲ್ಲಿ ಪತ್ರಕರ್ತ ರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಎರಡು ದಿನಗಳಿಂದ ಅಧಿಕಾರಿಗಳ ಸಭೆ ನಡೆಸಲಾಗಿತ್ತು ಎಂದರು.
ಯಾವದೇ ರೀತಿಯ ಅಹಿತಕರ ಘಟನೆಗಳು ನಡೆದರೆ ತಕ್ಷಣ ಅವರನ್ನು ಬಂಧಿಸುವಂತೆ ಸೂಚಿಸಲಾಗಿದೆ. ಇದುವರೆಗೂ ರಾಜ್ಯದಲ್ಲಿ ಯಾವದೇ ಘಟನೆಗಳು ನಡೆದಿಲ್ಲ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4