ರಾಮನಗರ: ಬಿಡದಿಯಲ್ಲಿರುವ ಪ್ರತಿಷ್ಠಿತ ಕಂಪನಿಯ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಿಡದಿ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಕರ್ನಾಟಕದ ಹೈಮದ್ ಹುಸೇನ್ (24) ಮತ್ತು ಸಾದಿಕ್ (20) ಬಂಧಿತರು ಎಂದು ಗುರುತಿಸಲಾಗಿದೆ. ಟೊಯೋಟಾ ಕಾರ್ಖಾನೆಯಲ್ಲಿ ಗುತ್ತಿಗೆ ಆಧಾರದಲ್ಲಿ ಇವರಿಬ್ಬರು ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಆರೋಪಿಗಳು ಕಾರ್ಖಾನೆಯ ಶೌಚಾಲಯದ ಗೋಡೆ ಮೇಲೆ ಪಾಕಿಸ್ತಾನ ಕೀ ಜೈ, ಪಾಕಿಸ್ತಾನಕ್ಕೆ ಜಯವಾಗಲಿ ಎಂದು ಬರೆದಿದ್ದರು. ಜೊತೆಗೆ ಕನ್ನಡಿಗರನ್ನು ಅವಹೇಳನಕಾರಿ ಭಾಷೆಯಲ್ಲಿ ನಿಂದಿಸಿದ್ದರು ಎಂದು ಆರೋಪಿಸಲಾಗಿದೆ.
ಈ ವಿಷಯ ಬೆಳಕಿಗೆ ಬರುತ್ತಿದ್ದಂತೆ ಕನ್ನಡಪರ ಸಂಘಟನೆಗಳು ಕಾರ್ಖಾನೆ ಬಳಿ ಜಮಾಯಿಸಿದ್ದರು. ಪ್ರತಿಭಟನೆ ನಡೆಸಿ ಕಂಪನಿಯ ಆಡಳಿತ ಮಂಡಳಿ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದರು. ದೇಶದ್ರೋಹಿ ಪದ ಬಳಸಿದ ಹಾಗೂ ಕನ್ನಡಿಗರನ್ನು ನಿಂದಿಸಿರುವ ಕಿಡಿಗೇಡಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಆಗ್ರಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4