ವಿಕ್ಟೋರಿಯಾ ಆಸ್ಪತ್ರೆಯ ಅಸ್ಥಿ ಚಿಕಿತ್ಸಾ ಶಾಸ್ತ್ರ ವಿಭಾಗವು ನಗರದಲ್ಲಿ ರಾಷ್ಟ್ರೀಯ ಮೂಳೆ ಮತ್ತು ಕೀಲು ಪಾಕ್ಷಿಕ ದಿನಾಚರಣೆ ಕಾರ್ಯಕ್ರಮ ಅಯೋಜಿಸಲಾಗಿತ್ತು.
ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್‌ಐ) ಡೀನ್ ಡಾ. ರಮೇಶ್ ಕೃಷ್ಣ ಕೆ ಮಾತನಾಡಿ, ಪ್ರತಿ ಐವರಲ್ಲಿ ಒಬ್ಬರನ್ನು ಕಾಡುತ್ತಿರುವ ಮೂಳೆ ರಂಧ್ರತೆ ಸಮಸ್ಯೆಯು, ಅಂಗವಿಕಲತೆಗೆ ಕಾರಣವಾಗುತ್ತಿದೆ. ಈ ಸಮಸ್ಯೆ ಋತುಚಕ್ರ ನಿಂತ ಮಹಿಳೆಯರನ್ನು ಹೆಚ್ಚಾಗಿ ಕಾಡಲಾರಂಭಿಸಿದೆ ಎಂದು ತಿಳಿಸಿದರು.
ಮೊಣಕಾಲು ಹಾಗೂ ಕೀಲು ನೋವು, ನಿರಂತರ ಸೊಂಟ ನೋವು, ನಡೆಯಲು ಸಾಧ್ಯವಾಗದಿರುವುದು ಸೇರಿ ವಿವಿಧ ಸಮಸ್ಯೆಗಳು ಕಾಣಿಸಿಕೊಂಡಾಗ ವೈದ್ಯಕೀಯ ಸಹಾಯ ಪಡೆಯಬೇಕು. ಕೋವಿಡ್ ಸಾಂಕ್ರಾಮಿಕದ ಅವಧಿಯಲ್ಲಿ ವಿಭಾಗವು ಸುಮಾರು 60 ಸಾವಿರ ಹೊರರೋಗಿಗಳಿಗೆ ವೈದ್ಯಕೀಯ ಸೇವೆ ಒದಗಿಸಿದೆ. 2,500 ಮಂದಿಗೆ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗಿದೆ. 250 ಪ್ರಕರಣಗಳಲ್ಲಿ ಕೀಲುಗಳ ಮರುಜೋಡಣೆ ಮಾಡಲಾಗಿದೆ. ಆಸ್ಪತ್ರೆಯಲ್ಲಿರುವ ಈ ವಿಭಾಗವು ಅತ್ಯಾಧುನಿಕ ವೈದ್ಯಕೀಯ ಸಾಧನಗಳನ್ನು ಹೊಂದಿದ್ದು, ಎಲ್ಲ ವಯೋಮಾನದವರಿಗೂ ಚಿಕಿತ್ಸೆ ಒದಗಿಸಲಾಗುತ್ತದೆ. ಜನರು ಇದರ ಲಾಭ ಪಡೆದುಕೊಳ್ಳಬೇಕು’ ಎಂದು ಮನವಿ ಮಾಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


