ತುಮಕೂರು : ನಟ ಹಾಗೂ ನಿರ್ಮಾಪಕ ಕೆ.ಮಂಜು ಅವರ ಮಗ ಶ್ರೇಯಸ್ ಸಂಚರಿಸುತ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದ ಘಟನೆ ತುಮಕೂರು ಜಿಲ್ಲೆ, ಶಿರಾ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಘಟನೆಯಲ್ಲಿ ಶ್ರೇಯಸ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಎಡ ಭಾಗಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರು ಸ್ವಲ್ಪ ಪ್ರಮಾಣದಲ್ಲಿ ಜಖಂಗೊಂಡಿದೆ.
ವಿಷಯ ತಿಳಿದ ಸ್ಥಳಕ್ಕೆ ಬಂದ ಶಿರಾ ಪೊಲೀಸ್ ಠಾಣೆ ಸಿಬ್ಬಂದಿ ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4