ತೆಲುಗು ಚಿತ್ರರಂಗದ ನಿರ್ಮಾಪಕ ಮತ್ತು ನಿರ್ದೇಶಕ ಕೊಮರಿ ಜನಯ್ಯ ನಾಯ್ಡು (44) ಅವರ ಮೃತದೇಹ ಕುಕಟ್ಪಲ್ಲಿಯ ಭಾಗ್ಯ ನಗರದ ಹೋಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕೊಮರಿ ಜನಯ್ಯ ನಾಯ್ಡು ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವುದನ್ನು ಮೊದಲು ಹೊಟೇಲ್ ಸಿಬ್ಬಂದಿ ಗಮನಿಸಿ ಆಡಳಿತ ಮಂಡಳಿ ಹಾಗೂ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿದ್ದು, ಪ್ರಾಥಮಿಕ ತನಿಖೆ ನಡೆಸುತ್ತಿದ್ದಾರೆ.
ಕೊಮರಿ ಜನಯ್ಯ ನಾಯ್ಡು ಅವರು ಹಲವು ಚಲನ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ತೊಲುಬೊಮ್ಮಲ ಸಿತ್ರಾಲು ಎಂಬ ನಿರ್ಮಾಣ ಸಂಸ್ಥೆ ಆರಂಭಿಸಿದ್ದರು. ಅದರಲ್ಲಿ ‘ಜಿಎಸ್ಟಿ (ಗಾಡ್ ಸೈಥಾನ್ ಟೆಕ್ನಾಲಜಿ)’ ಎಂಬ ಸಣ್ಣ ಚಲನಚಿತ್ರವನ್ನು ಮಾಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296